* ಪೋಖ್ರಾನ್–1 ಹಾಗೂ ಪೋಖ್ರಾನ್–2 ಪರಮಾಣು ಪರೀಕ್ಷೆಯಲ್ಲಿ ಪ್ರಮುಖಪಾತ್ರ ವಹಿಸಿದ್ದ ಹಿರಿಯ ಪರಮಾಣು ವಿಜ್ಞಾನಿ ಹಾಗೂ ಕ್ರಿಸ್ಟಲೋಗ್ರಫರ್ ಡಾ. ರಾಜಗೋಪಾಲ ಚಿದಂಬರಂ ಅವರು (89) ಶನಿವಾರ(ಜನವರಿ 04) ನಿಧನರಾದರು. ಕಳೆದ ಕೆಲ ದಿನಗಳಿಂದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
* ಅಂತರರಾಷ್ಟ್ರೀಯ ಪರಮಾಣು ಇಂಧನ ಏಜೆನ್ಸಿ (IAEA) ಆಡಳಿತ ಮಂಡಳಿಗೆ 1994–95 ಅವಧಿಯ ಅಧ್ಯಕ್ಷರಾಗಿದ್ದರು. ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿದ್ದರು.
* ಭಾರತದ ಪರಮಾಣು ಶಸ್ತ್ರಾಸ್ತ್ರ ಕಾರ್ಯಕ್ರಮದಲ್ಲಿ ಡಾ. ಚಿದಂಬರಂ ಅವರು ಪ್ರಮುಖ ಪಾತ್ರ ವಹಿಸಿದ್ದರು.
* 1975ರ ಪೋಖ್ರಾನ್–1 ಪರೀಕ್ಷೆ ಹಾಗೂ 1998ರಲ್ಲಿ ನಡೆದ ಪೋಖ್ರಾನ್ –2 ಪರೀಕ್ಷೆಯ ಸಂಯೋಜಕರಾಗಿದ್ದರು. ಪದ್ಮಶ್ರೀ (1975) ಹಾಗೂ ಪದ್ಮ ವಿಭೂಷಣ (1999) ಪ್ರಶಸ್ತಿಗಳು ಡಾ. ಚಿದರಂಬರಂ ಅವರಿಗೆ ಸಂದಿವೆ.
ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ನಿಧನ
Published by Jyoti Angadi
04 ಜನವರಿ 2025