* ಮಹದಾಯಿ ವನ್ಯಜೀವಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೊಷಿಸಲಾಗಿದ್ದು, ಬಾಂಬೆ ಹೈಕೋರ್ಟ್ನ ಗೋವಾ ಪೀಠವು ಮೂರು ತಿಂಗಳೊಳಗೆ ಅಧಿಸೂಚನೆ ಹೊರಡಿಸುವಂತೆ ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
* ಉತ್ತರ ಗೋವಾದಲ್ಲಿರುವ ಮಹದಾಯಿ ವನ್ಯಜೀವಿ ಧಾಮವು ಕಾಳಿ ಹುಲಿ ಮೀಸಲು ಪ್ರದೇಶ, ಭೀಮಾಘರ್ ವನ್ಯಜೀವಿ ಧಾಮ ಮತ್ತು ಭಗವಾನ್ ಮಹಾವೀರ ರಾಷ್ಟ್ರೀಯ ಉದ್ಯಾನಗಳನ್ನು ಒಳಗೊಂಡಂತೆ ಭೌಗೋಳಿಕವಾಗಿ ಕರ್ನಾಟಕದ ಜೊತೆಗೆ ಸೇರಿಕೊಂಡಿದೆ.
* ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ಮನವಿಯಂತೆ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಬಗ್ಗೆ ಅಧಿಸೂಚನೆ ಹೊರಡಿಸಲು ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಗೋವಾ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಬುಧವಾರ, 26 ಜುಲೈ 2023
11:11 ಪೂರ್ವಾಹ್ನ
Daily PDF
ಹುಲಿ ಸಂರಕ್ಷಣಾ ಅರಣ್ಯವಾಗಿ ಮಹದಾಯಿ ಧಾಮ
Authored by:
Yallamma G