➤ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಶೂಟರ್‌ಗಳು ಭರ್ಜರಿ ಶುಭಾರಂಭ ಮಾಡಿದ್ದಾರೆ. ಮಹಿಳೆಯರ 10 ಮೀಟರ್ ಏರ್‌ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್‌1 (SH1) ವಿಭಾಗದಲ್ಲಿ ಭಾರತದ ಮೋನಾ ಅಗರ್ವಾಲ್ ಚಿನ್ನದ ಪದಕ ಮುಡಿಗೇರಿಸಿಕೊಂಡರೆ, ಸ್ಟಾರ್ ಶೂಟರ್ ಅವನಿ ಲೇಖರಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
➤ ಫೈನಲ್ ಪಂದ್ಯದ ರೋಚಕ ಮುಖ್ಯಾಂಶಗಳು:

  • ಮೋನಾಗೆ ಒಲಿದ ಚಿನ್ನ: ಫೈನಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮೋನಾ ಅಗರ್ವಾಲ್ 250 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.  
  • ಅವನಿಗೆ ಬೆಳ್ಳಿ: ಭಾರತದ ಮತ್ತೋರ್ವ ಹೆಮ್ಮೆಯ ಕ್ರೀಡಾಪಟು ಅವನಿ ಲೇಖರಾ 249.6 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.  
  • ದಕ್ಷಿಣ ಕೊರಿಯಾಗೆ ಕಂಚು: ದಕ್ಷಿಣ ಕೊರಿಯಾದ ಶೂಟರ್ ಲೀ ಯುನ್‌ರಿ 227.9 ಅಂಕಗಳೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ

➤ ದೇಶಕ್ಕೆ ಹೆಮ್ಮೆ ತಂದ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಶ್ಲಾಘನೆ:
ಈ ಅಪೂರ್ವ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 'X' ಖಾತೆಯ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. "ಭಾರತದ ಪ್ಯಾರಾ ಕ್ರೀಡಾಪಟುಗಳ ಸಾಧನೆಯ ಬಗ್ಗೆ ದೇಶಕ್ಕೆ ಅಪಾರ ಹೆಮ್ಮೆ ಇದೆ. ಅವರ ದೃಢಸಂಕಲ್ಪ ಮತ್ತು ಅಚಲ ಮನೋಭಾವವು 140 ಕೋಟಿ ಭಾರತೀಯರಿಗೆ ಸ್ಫೂರ್ತಿ ನೀಡುತ್ತದೆ. ಆತ್ಮವಿಶ್ವಾಸದಿಂದ ಸ್ಪರ್ಧಿಸಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲಿ ಎಂದು ಹಾರೈಸುತ್ತೇನೆ," ಎಂದು ಅವರು ಅಭಿನಂದಿಸಿದ್ದಾರೆ.