* ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ಹೇಮಂತ್‌ ಸೊರೆನ್‌ ನವೆಂಬರ್ 28 ರಂದು 4ನೇ ಬಾರಿಗೆ ಜಾರ್ಖಂಡ್‌ನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 
* ರಾಂಚಿಯ ಮೊರ್ಹಬಾದಿ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಜಾರ್ಖಂಡ್‌ ರಾಜ್ಯಪಾಲ ಸಂತೋಷ್‌ ಕುಮಾರ್‌ ಗಂಗ್ವಾರ್‌ ಅವರು 49 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆ ಎಂಎಂ) ನಾಯಕ ಹೇಮಂತ್‌ ಸೊರೆನ್‌ ಅವರಿಗೆ ಪ್ರತಿಜ್ಞಾವಿಧಿ ಬಿಡಿಸಿದ್ದರು.
* ಹೇಮಂತ್ ಸೊರೆನ್ ನೇತೃತ್ವದ ಅವರ ಜೆಎಂಎಂ ಮತ್ತು ಕಾಂಗ್ರೆಸ್​ ಮೈತ್ರಿಯು ಜಾರ್ಖಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿತು. 81 ಸದಸ್ಯ ಬಲದ ವಿಧಾನಸಭೆಯಲ್ಲಿ 56 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಜೆಪಿ ನೇತೃತ್ವದ ಎನ್‌ಡಿಎ ಕೇವಲ 24 ಸೀಟು ಮಾತ್ರ ಗೆದ್ದಿದೆ. ಬಹುಮತಕ್ಕೆ ಬೇಕಾಗಿದ್ದ 41 ಸೀಟುಗಳು.