* ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಾಂಪೈ ಸೂರೇನ್ ಅವರು ಜಾರ್ಖಂಡ ನ 12 ನೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
* ಅವರ ಜೊತೆ ಕಾಂಗ್ರೆಸ್ ನ ಹಿರಿಯ ನಾಯಕ ಅಲಂಗೀರ್ ಅಲಂ ಮತ್ತು ಆರ್ ಜೆಡಿ ನಾಯಕ ಸತ್ಯಾನಂದ ಭೋಕ್ತಾ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
* ರಾಂಚಿಯ ರಾಜಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
* ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲಿಸಿದ್ದರು.
* ಜಾರ್ಖಂಡ್ ಬಿಜೆಪಿ ಸರ್ಕಾರದಲ್ಲಿ ಸಿಎಂ ಅರ್ಜುನ್ ಮುಂಡಾ ಅವರ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರಾಗಿದ್ದ ಚಂಪೈ ಸೊರೇನ್, ಸೆಪ್ಟೆಂಬರ್ 2010ರಿಂದ ಜನವರಿ 2013ರವರೆಗೆ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ಹೇಮಂತ್ ಸೊರೇನ್ ಸರ್ಕಾರದಲ್ಲೂ ಚಂಪೈ ಸೊರೇನ್ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಶನಿವಾರ, 03 ಫೆಬ್ರುವರಿ 2024
10:49 ಪೂರ್ವಾಹ್ನ
Daily PDF
ಜಾರ್ಖಂಡ ನ 12 ನೆ ಮುಖ್ಯಮಂತ್ರಿಯಾಗಿ ಚಾಂಪೈ ಸೂರೇನ್ ಪ್ರಮಾಣ ವಚನ ಸ್ವೀಕಾರ
Authored by:
Bhagya R K