* ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಮುಂಬರುವ ಸೆಂಬ್ಲಿ ಚುನಾವಣೆಗಳ ಜಾರ್ಖಂಡ್ ಚುನಾವಣೆಯ ಬ್ರಾಂಡ್ ಅಂಬಾಸಿಡರ್ ಆಗಿ ಚುನಾವಣಾ ಆಯೋಗ ನೇಮಿಸಿದೆ.
* "ಮಹೇಂದ್ರ ಸಿಂಗ್ ಧೋನಿ ತಮ್ಮ ಫೋಟೋ ಬಳಸಲು ಚುನಾವಣಾ ಆಯೋಗಕ್ಕೆ ಒಪ್ಪಿಗೆ ನೀಡಿದ್ದಾರೆ. ಇತರ ವಿವರಗಳಿಗಾಗಿ ನಾವು ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಮಹೇಂದ್ರ ಸಿಂಗ್ ಧೋನಿ ಮತದಾರರನ್ನು ಕ್ರೋಢೀಕರಿಸುವ ಕೆಲಸ ಮಾಡುತ್ತಾರೆ" ಎಂದು ಮುಖ್ಯ ಚುನಾವಣಾಧಿಕಾರಿ ಕೆ.ರವಿಕುಮಾರ್ ತಿಳಿಸಿದ್ದಾರೆ.
* ಧೋನಿ ಅವರು ಸ್ವೀಪ್ (ಸಿಸ್ಟಮ್ಯಾಟಿಕ್ ವೋಟರ್ಸ್ ಎಜುಕೇಶನ್ ಮತ್ತು ಎಲೆಕ್ಟೋರಲ್ ಪಾರ್ಟಿಸಿಪೇಷನ್) ಕಾರ್ಯಕ್ರಮದ ಅಡಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಕೆಲಸ ಮಾಡುತ್ತಾರೆ.
* ನವೆಂಬರ್ 13 ರಂದು ಮೊದಲ ಹಂತದಲ್ಲಿ ಒಟ್ಟು ನಲವತ್ಮೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಶನಿವಾರ, 26 ಅಕ್ಟೋಬರ್ 2024
12:59 ಅಪರಾಹ್ನ
Daily PDF
ಜಾರ್ಖಂಡ್ ನ ಚುನಾವಣೆಯ ಬ್ರಾಂಡ್ ಅಂಬಾಸಿಡರ್ ಆಗಿ ಮಹೇಂದ್ರ ಸಿಂಗ್ ದೋನಿ ನೇಮಕ
Authored by:
Bhagya R K