* ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.* ನಾಲ್ಕನೇ ಬಾರಿಗೆ ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. * ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮಹಾಘಟಬಂಧನ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟ 81 ಸ್ಥಾನಗಳ ಪೈಕಿ 56 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತವನ್ನು ಪಡೆದುಕೊಳ್ಳುವ ಮೂಲಕ ಮತ್ತೆ ತನ್ನದೇ ಸ್ಥಾನವನ್ನು ಕಾಯ್ದುಕೊಂಡಿದೆ.* ಜಾರ್ಖಂಡ್ ಮುಕ್ತಿ ಮೋರ್ಚಾ (JMM)34 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಅದರ ಮೈತ್ರಿ ಪಾಲುದಾರ ಕಾಂಗ್ರೆಸ್ 16 ಸ್ಥಾನಗಳನ್ನು ಪಡೆದುಕೊಂಡಿದೆ. ಅದೇ ರೀತಿ ಆರ್ಜೆಡಿ ಮತ್ತು ಸಿಪಿಐ(ಎಂಎಲ್) ಲಿಬರೇಷನ್ ಕ್ರಮವಾಗಿ 4 ಮತ್ತು ಎರಡು ಸ್ಥಾನಗಳನ್ನು ಪಡೆದುಕೊಂಡಿದೆ.* ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಇತರರು ಭಾಗಿ ನಿರೀಕ್ಷಿಸಲಾಗಿದೆ.* ಸಚಿವ ಸಂಪುಟ ರಚನೆ ಅಂತಿಮ ಹಂತದಲ್ಲಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಹೇಮಂತ್ ಚರ್ಚೆ ನಡಿಸಲಿದ್ದಾರೆ.