* ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ನಡೆಸಿದ ಜಾತಿವಾರು ಜನಗಣತಿ ನಡೆಸಿದ್ದ ಜಾತಿವಾರು ಜನಗಣತಿ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ - 2015) ವರದಿಯನ್ನು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಸ್ವೀಕರಿಸಿದೆ.
* ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಜಾತಿವಾರು ಜನಗಣತಿ ವರದಿಯನ್ನು ಅಧಿಕೃತವಾಗಿ ಫೆಬ್ರುವರಿ 29 ರಂದು (ಗುರುವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
* 2013-18 ರ ಸಾಲಿನಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜ ಅವರ ನೇತೃತ್ವದಲ್ಲಿ ಈ ಸಮೀಕ್ಷೆಯನ್ನು 158 ಕೋಟಿ ವೆಚ್ಚದಲ್ಲಿ ನಡೆಸಲಾಗಿತ್ತು.
* ರಾಜ್ಯ ಸರ್ಕಾರ ಈ ಸಮೀಕ್ಷೆಗೆ 2014-2015 ನೇ ಸಾಲಿನಿಂದ 2016-17 ಸಾಲಿನವರೆಗೆ ಒಟ್ಟು 206.84 ಕೋಟಿ ನಿಗದಿಪಡಿಸಿದ್ದು, ಅದರಲ್ಲಿ 192.79 ಕೋಟಿ ಬಿಡುಗಡೆ ಮಾಡಿದೆ. ವರದಿ ಸಿದ್ಧಪಡಿಸಲು 158.47 ಕೋಟಿ ವೆಚ್ಚ ಮಾಡಲಾಗಿದೆ. ಜಾತಿ ಜನಗಣತಿಯ ಗಣಕೀಕರಣಕ್ಕೆ ಬಿಇಎಲ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. 
* 2015ರಲ್ಲಿ ರಾಜ್ಯದ ಒಟ್ಟು ಜನಸಂಖ್ಯೆಯನ್ನು 6.50 ಕೋಟಿ ಎಂದು ಅಂದಾಜಿಸಿ, ಪ್ರತಿ ವ್ಯಕ್ತಿಯ ಮಾಹಿತಿ ಗಣಕೀಕರಿಸಲು ಮತ್ತು ಪೋರ್ಟಲ್‌ನಲ್ಲಿ ಅಳವಡಿಸಿ ಆಯೋಗಕ್ಕೆ ಬೇಕಾಗುವ ವರದಿ ಒದಗಿಸಲು ತಲಾ 6.14ರಂತೆ ಸಂಸ್ಥೆಗೆ ವಹಿಸಲಾಗಿತ್ತು.
* ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರು ಸಲ್ಲಿಸಿರುವ ವರದಿಯಲ್ಲಿ ಒಟ್ಟು 13 ಪ್ರತಿಗಳಿದ್ದು, ಅವುಗಳಲ್ಲಿ ಈ ಕೆಳಗಿನ ಪ್ರಮುಖ ಅಂಶಗಳಿವೆ,
- ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಸಮಗ್ರ ರಾಜ್ಯ ವರದಿ
- ಜಾತಿವಾರು ಜನಸಂಖ್ಯೆ ವಿವರ - 1 ಸಂಪುಟ
- ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತುಪಡಿಸಿ)
- ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿಗಳು)
- ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು)
- ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ-ಅಂಶಗಳು (ಎರಡು ಸಿಡಿಗಳು)
- ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 201 ರ ದತ್ತಾಂಶಗಳ ಅಧ್ಯಯನ ವರದಿ-2024