* ಜಿ-20 ಶೃಂಗಸಭೆಯ ಈ ಬಾರಿಯ ಅಧ್ಯಕ್ಷೀಯ ರಾಷ್ಟ್ರ ಭಾರತವಾಗಿದ್ದು, ಜಿ-20 ಶೃಂಗಸಭೆಯ ಮೂರನೇ ಸಭೆ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಇದೇ 9ರಿಂದ 16ರವರೆಗೆ ನಡೆಯಲಿದೆ ಎಂದು ಜಿ-20 ಶೃಂಗಸಭೆ ಆಯೋಜನೆಯ ಮುಖ್ಯಸ್ಥ (ಶೆರ್ಪಾ) ಅಮಿತಾಭ್ ಕಾಂತ್ ಅವರು ತಿಳಿಸಿದರು.
* ಜಾಗತಿಕ ಮಟ್ಟದ ಒಟ್ಟು ಜಿ-20 ಶೃಂಗಸಭೆಯ 20 ಸದಸ್ಯ ರಾಷ್ಟ್ರಗಳು, 9 ಆಹ್ವಾನಿತ ರಾಷ್ಟ್ರಗಳು ಸೇರಿದಂತೆ ಒಟ್ಟು 43 ರಾಷ್ಟ್ರಗಳು ಈ ಸಭೆಯಲ್ಲಿ ಭಾಗವಹಿಸಲಿವೆ.
* 3ನೇ ಶೆರ್ಪಾ ಸಭೆಯು 'ವಸುದೈವ ಕುಟುಂಬಕಂ" ಎಂಬ ಧ್ಯೇಯದಡಿ, 'ಒಂದು ಭೂಮಿ, ಒಂದು ಕುಟುಂಬ, ಒಂದೇ ಭವಿಷ್ಯ' ಎಂಬ ಘೋಷವಾಕ್ಯದಡಿ ಶೃಂಗಸಭೆ ಆಯೋಜನೆ ಮಾಡಲಾಗುತ್ತಿದೆ.
* ರಾಜಸ್ಥಾನದ ಉದಯಪುರ, ಅಸ್ಸಾಮಿನ ಕುಮಾರ್ಗಮ್‌ನಲ್ಲಿ ಶೆರ್ಪಾ ಸಭೆಗಳು ನಡೆಯಲಾಗಿದ್ದು, ಜಾಗತಿಕ ಮಟ್ಟದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಹಿರಿಮೆ ಮತ್ತು ಉತ್ಪನ್ನಗಳನ್ನು ಉನ್ನತೀಕರಿಸಲು 3ನೇ ಶೆರ್ಪಾ ಸಭೆ ವಿಶ್ವವಿಖ್ಯಾತ ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ ನಡೆಯಲಿದೆ.
ಸೋಮವಾರ, 03 ಜುಲೈ 2023
1:32 ಅಪರಾಹ್ನ
Daily PDF
ಜಿ-20 ಶೃಂಗಸಭೆಯ 3ನೇ ಶೆರ್ಪಾ ಸಭೆ: ಪ್ರವಾಸೋದ್ಯಮ, ಕಲೆ-ಸಂಸ್ಕೃತಿ ಬೆಳವಣಿಗೆಗೆ ಅವಕಾಶ
Authored by:
Bhagya R K