* ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಅಕ್ಟೋಬರ್ 16 ರಂದು (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
* ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
* ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ಒಮರ್ ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸಂಪುಟ ಸಚಿವರಾಗಿ ಸುರೇಂದ್ರ ಚೌಧರಿ, ಸಕೀನಾ, ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸತೀಶ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
* ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಕ್ಟೋಬರ್ 14 ರಂದು (ಸೋಮವಾರ) ಒಮರ್ ಅಬ್ದುಲ್ಲಾ ಅವರಿಗೆ ಆಹ್ವಾನಿಸಿದ್ದಾರೆ.
* ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆದ ಒಂದು ದಿನದ ನಂತರ ಲೆಫ್ಟಿನೆಂಟ್ ಗವರ್ನರ್ ಕಣಿವೆಯಲ್ಲಿ ಚುನಾಯಿತ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ.
* ಇತ್ತೀಚೆಗೆ ಮುಕ್ತಾಯಗೊಂಡ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಒಮರ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) 42 ಸ್ಥಾನಗಳನ್ನು ಗೆದ್ದಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) 29 ಸ್ಥಾನಗಳನ್ನು ಗೆದ್ದುಕೊಂಡಿದೆ,
* ಒಮರ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ನಾಲ್ವರು ಸ್ವತಂತ್ರ ಶಾಸಕರು ಪಕ್ಷಕ್ಕೆ ಸೇರುವ ನಿರ್ಧಾರದ ನಂತರ ಬಹುಮತವನ್ನು ಸಾಧಿಸಿದೆ.
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್
Published by Bhagya R K
16 ಅಕ್ಟೋಬರ್ 2024