* ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿಗಳ ದಿನವನ್ನು ಆಚರಿಸಲಾಗುತ್ತದೆ.
* ಇತ್ತಿಚಿನ ದಿನಗಳಲ್ಲಿ ಅಳುವಿನಂಚಿನತ್ತ ಹುಲಿಯ ಸಂತತಿಯು ಸಾಗುತ್ತಿದೆ. ಕ್ಷೀಣಿಸುತ್ತಿರುವ ಹುಲಿಗಳ ಸಂಖ್ಯೆಯ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಂತರಾಷ್ಟ್ರೀಯ ಹುಲಿಗಳ ದಿನವನ್ನು ಆಚರಿಸಲಾಗುತ್ತದೆ.
* 2010 ಜುಲೈ 29ರಂದು ಮೊದಲ ಬಾರಿಗೆ ಅಂತರಾಷ್ಟ್ರೀಯ ಹುಲಿ ದಿನವನ್ನು ರಷ್ಯಾದ ಸೆಂಟ್ ಪೀಟರ್ ಬರ್ಗ್‌ನಲ್ಲಿ ಆಚರಿಸಲಾಯಿತು
* ನಾಲ್ಕು ವರ್ಷಕ್ಕೊಮ್ಮೆ ಹುಲಿ ಗಣತಿ ಮಾಡಲಾಗುತ್ತದೆ. ಪ್ರಪಂಚದ 13 ದೇಶಗಳ ಕಾಡಿನಲ್ಲಿ ಮಾತ್ರ ಹುಲಿಗಳನ್ನು ನಾವು ಕಾಣಬಹುದಾಗಿದೆ. 2018ರ ಗಣತಿ ಪ್ರಕಾರ ಮಧ್ಯಪ್ರದೇಶದಲ್ಲಿ 526 ಹುಲಿಗಳಿದ್ದು, ಮಧ್ಯಪ್ರದೇಶ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ, ಕರ್ನಾಟಕದಲ್ಲಿ 524 ಹುಲಿಗಳಿದ್ದು ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
* ಭಾರತದಲ್ಲಿ ಹುಲಿಗಳ ಸಂಖ್ಯೆ 2018ರಲ್ಲಿ 2,967 ಇತ್ತು. 2022ರಲ್ಲಿ ಇವುಗಳ ಸಂಖ್ಯೆ 3,167ಕ್ಕೆ ಏರಿಕೆಯಾಗಿದೆ. ಹುಲಿಗಳನ್ನು ರಕ್ಷಿಸಲು, ಸರಕಾರ 'ಪ್ರಾಜೆಕ್ಟ್ ಟೈಗರ್' ಎಂಬ ಉಪಕ್ರಮವನ್ನು 1973ರಲ್ಲಿ ಪ್ರಾರಂಭಿಸಿತು. ಹುಲಿ ಮೀಸಲುಗಳನ್ನು ಸ್ಥಾಪಿಸಿದೆ. ನೈಸರ್ಗಿಕ ಆವಾಸ ಸ್ಥಾನಗಳಲ್ಲಿ ಹುಲಿಗಳ ಸಂಖ್ಯೆ ಉಳಿಸಲು ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
* ವಿಶ್ವದಲ್ಲಿರುವ ಒಟ್ಟು ಹುಲಿಗಳ ಸಂಖ್ಯೆಯಲ್ಲಿ ಶೇ.75ರಷ್ಟು ಭಾರತದಲ್ಲಿವೆ. ಮಧ್ಯಪ್ರದೇಶದಲ್ಲಿ 785 ಹುಲಿಗಳಿದ್ದು, ಅತಿ ಹೆಚ್ಚು ಹುಲಿಗಳಿರುವ ರಾಜ್ಯಗಳಲ್ಲಿ ಮೊದಲ ಸ್ಥಾನದಲ್ಲಿದೆ. 563 ಹುಲಿಗಳೊಂದಿಗೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. 560 ಹುಲಿಗಳಿರುವ ಉತ್ತರಾಖಂಡ ಮೂರನೇ ಸ್ಥಾನದಲ್ಲಿದೆ, 444 ಹುಲಿಗಳಿರುವ ಮಹಾರಾಷ್ಟ್ರ ನಾಲ್ಕನೇ ಸ್ಥಾನದಲ್ಲಿದೆ.
ಜುಲೈ 29 ಅಂತಾರಾಷ್ಟ್ರೀಯ ಹುಲಿಗಳ ದಿನ
Published by Yallamma G
29 ಜುಲೈ 2024