➤ ಜಾಗತಿಕ ಮಟ್ಟದಲ್ಲಿ ಪ್ರತಿ ವರ್ಷ ಜೂನ್ 26 ರಂದು ಮಾದಕ ವಸ್ತುಗಳ ದುರ್ಬಳಕೆ ಮತ್ತು ಅದರ ಅಕ್ರಮ ಕಳ್ಳಸಾಗಣೆಯನ್ನು ತಡೆಯಲು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
➤ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ 2026 ರ ಥೀಮ್ ""ವಿಶ್ವದ ಮಾದಕವಸ್ತು ಸಮಸ್ಯೆ: ಮುಂದುವರಿಯುತ್ತಿರುವ ಸವಾಲುಗಳು, ಹೊಸ ಅಡೆತಡೆಗಳು ಮತ್ತು ನವೀನ ಪ್ರತಿಕ್ರಿಯೆಗಳು" (“World drug problem: persisting issues, new challenges, innovative responses”)" ಎಂದು ಥೀಮ್ ಆಗಿದೆ.
➤ ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
➤ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು 1987 ಡಿಸೆಂಬರ್ 7ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್ 26 ಎಂದು ಘೋಷಿಸಲಾಯಿತು.
➤ ತಡೆಗಟ್ಟುವಿಕೆ ಮತ್ತು ನಮ್ಮ ಜವಾಬ್ದಾರಿ
- ಮಾದಕವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆಯಲು ಕಠಿಣ ಕಾನೂನುಗಳಷ್ಟೇ ಸಾಲದು, ಅದಕ್ಕೆ ಸಾಮೂಹಿಕ ಪ್ರಯತ್ನದ ಅಗತ್ಯವಿದೆ:
- ಜಾಗೃತಿ ಮತ್ತು ಶಿಕ್ಷಣ: ಶಾಲೆ, ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಿಗೆ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ನಿರಂತರ ಅರಿವು ಮೂಡಿಸಬೇಕು.
- ಕುಟುಂಬದ ಪಾತ್ರ: ಪೋಷಕರು ತಮ್ಮ ಮಕ್ಕಳ ನಡವಳಿಕೆಗಳ ಮೇಲೆ ಗಮನ ಹರಿಸಬೇಕು ಮತ್ತು ಅವರಿಗೆ ಆತ್ಮವಿಶ್ವಾಸದ ವಾತಾವರಣವನ್ನು ನಿರ್ಮಿಸಿಕೊಡಬೇಕು.
- ಸಹಾನುಭೂತಿ ಮತ್ತು ಪುನರ್ವಸತಿ: ಮಾದಕ ವ್ಯಸನಕ್ಕೆ ತುತ್ತಾದವರನ್ನು ಅಪರಾಧಿಗಳಂತೆ ನೋಡದೆ, ಅವರನ್ನು ಪ್ರೀತಿಯಿಂದ ನಡೆಸಿ ಸೂಕ್ತ ಕೌನ್ಸೆಲಿಂಗ್ ಹಾಗೂ ಪುನರ್ವಸತಿ ಕೇಂದ್ರಗಳ ಮೂಲಕ ಮುಖ್ಯವಾಹಿನಿಗೆ ತರಬೇಕು.
Test Your Knowledge!
Attempt daily current affairs quizzes to boost your exam readiness.
Discussion & Comments (0)
Have a query or thoughts about this current affair?
No comments on this article yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.