* ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವ ಅಂಗವಾಗಿ ಬೆಳಗಾವಿ ಜಿಲ್ಲೆಯ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುರುವಾರ (ಡಿ.26) ಅನಾವರಣಗೊಳಿಸಿದರು.ಇದರೊಂದಿಗೆ ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
* ಇದೇ ವೇಳೆ ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಫೋಟೊ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
* ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.
ಶುಕ್ರವಾರ, 27 ಡಿಸೆಂಬರ್ 2024
1:49 ಅಪರಾಹ್ನ
Daily PDF
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ
Authored by:
Yallamma G