* ಹಲವು ತಿಂಗಳಿನಿಂದ ಖಾಲಿ ಇದ್ದ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದ ಶಿಫಾರಸಿನ ಮೇರೆಗೆ ಸರ್ಕಾರದಿಂದ ಭಾನುವಾರ ನಾಮನಿರ್ದೇಶನ ಪ್ರಕಟವಾಯಿತು.
* ಆರತಿ ಕೃಷ್ಣ, ರಮೇಶ್ ಬಾಬು, ಎಫ್.ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಲಾಗಿದೆ.
* ರಮೇಶ್‌ಬಾಬು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದು, ಆರತಿ ಕೃಷ್ಣ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಅಧ್ಯಕ್ಷೆ. ಜಕ್ಕಪ್ಪನವರ್ ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ, ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಪತ್ರಕರ್ತ.
* ಹಿಂದಿನ ಸದಸ್ಯರಾದ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಹಾಗೂ ಪ್ರಕಾಶ್ ಕೆ. ರಾಥೋಡ್ ಅವರ ಅವಧಿ 2024 ಅಕ್ಟೋಬರ್‌ನಲ್ಲಿ ಮುಗಿಯಿತು.
* ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವಧಿ 2025 ಜನವರಿಯಲ್ಲಿ ಅಂತ್ಯಗೊಳ್ಳುತ್ತದೆ. ಸಿ.ಪಿ. ಯೋಗೇಶ್ವರ್ ಉಪಚುನಾವಣೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ದರು.
* ನಾಲ್ವರಲ್ಲಿ ಆರತಿ ಕೃಷ್ಣ ಒಕ್ಕಲಿಗ ಸಮುದಾಯಕ್ಕೆ, ರಮೇಶ್ ಬಾಬು ಹಿಂದುಳಿದ ವರ್ಗಕ್ಕೆ, ಜಕ್ಕಪ್ಪನವರ್ ಮತ್ತು ಶಿವಕುಮಾರ್ ದಲಿತ ಬಲಗೈ ಸಮುದಾಯಕ್ಕೆ ಸೇರಿದವರು.
ಕಾಂಗ್ರೆಸ್ ಶಿಫಾರಸಿನ ಮೇರೆಗೆ ನಾಲ್ವರ ವಿಧಾನ ಪರಿಷತ್ ಸದಸ್ಯರ ನೇಮಕ
Published by Jyoti Angadi
08 ಸೆಪ್ಟೆಂಬರ್ 2025