* ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜೂನ್ 25 ಅನ್ನು 'ಸಂವಿಧಾನ ಹತ್ಯಾ ದಿವಸ್' (ಸಂವಿಧಾನದ ಹತ್ಯೆಯ ದಿನ) ಎಂದು ಘೋಷಿಸಿದೆ.
* ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಅಧಿಕಾರ ದುರುಪಯೋಗದ ವಿರುದ್ಧ ಹೋರಾಡಿದವರಿಗೆ ಆ ದಿನದಂದು ಗೌರವ ಸಲ್ಲಿಸಲಾಗುವುದು ಎಂದು ಸರ್ಕಾರ ಹೇಳಿದೆ.
* ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಹೀಗಾಗಿ ಆ ದಿನವನ್ನು ಸಂವಿಧಾನ ಹತ್ಯೆ ದಿನವಾಗಿ ಆಚರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
* ಜೂನ್ 25, 1975 ರಂದು ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ತುರ್ತು ಪರಿಸ್ಥಿತಿಯನ್ನು ಹೇರಿತು, ಇದು ಎರಡು ವರ್ಷಗಳ ಕಾಲ ದೇಶವನ್ನು ಕರಾಳ ಸ್ಥಿತಿಗೆ ದೂಡಿತು.
* ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನೆದು ಅಮಿತ್ ಶಾ ಅವರು ʻಸಂವಿಧಾನ ಹತ್ಯಾ ದಿವಸ್ʼ ಆಚರಣೆ ಮಾಡುವಂತೆ ಘೋಷಣೆ ಮಾಡಿದ್ದಾರೆ.
ಶನಿವಾರ, 13 ಜುಲೈ 2024
11:42 ಪೂರ್ವಾಹ್ನ
Daily PDF
ಕೇಂದ್ರ ಸರ್ಕಾರ ಘೋಷಣೆ : ಜೂನ್ 25 ʼಸಂವಿಧಾನ್ ಹತ್ಯಾ ದಿವಸ್ʼ ಆಗಿ ಆಚರಣೆ
Authored by:
Bhagya R K