* ಕೇಂದ್ರ ಸಂಪುಟ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿ ವಿ ಸೋಮನಾಥನ್ ಆಗಸ್ಟ್ 30 ರಿಂದ ಎರಡು ವರ್ಷಗಳ ಅವಧಿಗೆ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
* 05 ವರ್ಷಗಳಿಂದಲೂ ರಾಜೀವ್ ಗೌಬಾ ಅವರು ಸಂಪುಟ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ತಮಿಳುನಾಡು ಕೇಡರ್‌ನ 1987-ಬ್ಯಾಚ್ ಐಎಎಸ್ ಅಧಿಕಾರಿ ಸೋಮನಾಥನ್ ಅವರನ್ನು ನೇಮಕ ಮಾಡಲಾಗಿದೆ.
* ಸೋಮನಾಥನ್ ಅವರು ಪ್ರಸ್ತುತ ಕೇಂದ್ರ ಹಣಕಾಸು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
* ರಾಜೀವ್ ಗೌಬಾ ಅವರು ಆಗಸ್ಟ್ 30, 2019 ರಿಂದ ಐದು ವರ್ಷಗಳ ಕಾಲ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸೋಮವಾರ, 12 ಆಗಸ್ಟ್ 2024
3:46 ಅಪರಾಹ್ನ
Daily PDF
ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಯಾಗಿ ಟಿ.ವಿ.ಸೋಮನಾಥನ್ ನೇಮಕ
Authored by:
Bhagya R K