* ಕನ್ನಡ ಚಿತ್ರರಂಗದ ಹಿರಿಯ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಕಣ್ಮಣಿಯಾಗಿದ್ದ ಬಹುಭಾಷಾ ತಾರೆ 85 ವರ್ಷ ವಯಸ್ಸಿನ ನಟಿ ಲೀಲಾವತಿ ಅವರು ಡಿಸೆಂಬರ್ 08 ರಂದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 
* ಕನ್ನಡ ದಿಗ್ಗಜ ನಟರಾಟ ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದವರ ಜೊತೆ ಅಭಿನಯಿಸಿ ಲೀಲಾವತಿ  ಅವರು ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗೂ ಕನ್ನಡದಲೇ 400 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
* ಲೀಲಾವತಿ ಅವರು ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು, ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದು ಕನ್ನಡದ ಕಂದ ಚಿತ್ರಕ್ಕೆ ಫಿಲ್ಮ್ ಫೇರ್​ ಪ್ರಶಸ್ತಿ ಕೂಡ ಸಿಕ್ಕಿತ್ತು. 
* ಲೀಲಾವತಿ ಅವರ ಜೀವಮಾನ ಸಾಧನೆಗಾಗಿ 1999ರಲ್ಲಿ ಡಾ. ರಾಜ್​ಕುಮಾರ್​ ಪ್ರಶಸ್ತಿ ಪಡೆದರು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್​ ನೀಡಲಾಗಿತ್ತು.