* ಕೈಗಾರಿಕೆಗಳು, ವಾಣಿಜ್ಯ ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ–2024 ಅನ್ನು ವಿಧಾನಸಭೆಯಲ್ಲಿ ಫೆ.13 ರಂದು ಮಂಡಿಸಲಾಯಿತು.
* ಕನ್ನಡ ಮತ್ತು ಸಂಸ್ಕೃತಿ ಸಚಿವರ ಪರವಾಗಿ ಗೃಹ ಸಚಿವ ಜಿ. ಪರಮೇಶ್ವರ ಮಸೂದೆಯನ್ನು ಮಂಡಿಸಿದರು.
* ಮನರಂಜನಾ ಕೇಂದ್ರಗಳು, ಹೋಟೆಲ್ ಗಳು, ಪ್ರಯೋಗಾಲಯಗಳು ಮತ್ತು ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು ಸೇರಿದಂತೆ ಎಲ್ಲ ಬಗೆಯ ಸಂಸ್ಥೆಗಳಿಗೂ ಈ ತಿದ್ದುಪಡಿ ಅನ್ವಯವಾಗಲಿದೆ.
ಬುಧವಾರ, 14 ಫೆಬ್ರುವರಿ 2024
1:02 ಅಪರಾಹ್ನ
Daily PDF
ಕನ್ನಡ ನಾಮಫಲಕ : ಮಸೂದೆ ಮಂಡನೆ
Authored by:
Yallamma G