* ಕರ್ನಾಟಕ ಕ್ರೀಡಾಕೂಟ -2025 ಅನ್ನು ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.* ಚೊಚ್ಚಲ ಆವೃತ್ತಿಯ ಕರ್ನಾಟಕ ಹಿರಿಯರ ಒಲಿಂಪಿಕ್ಸ್ 2025ರ ಜನವರಿ.17ರಿಂದ 23ರವರೆಗೆ ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ನಡೆಯಲಿದ್ದು, ಇದರ ಲಾಂಛನವನ್ನು ಡಿಸೆಂಬರ್ 23 ರಂದು (ಸೋಮವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆಗೊಳಿಸಿದರು.* ಕ್ರೀಡಾಕೂಟದ ಲೋಗೋದಲ್ಲಿ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆ . ಬಿಂಬಿಸುವ ಯಕ್ಷಗಾನದ ಕಿರೀಟವಿದ್ದು, ಕೂಟದಲ್ಲಿ 25 ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಮಂಗಳೂರಿನಲ್ಲಿ 12, ಉಡುಪಿ, ಮಣಿಪಾಲದಲ್ಲಿ 11, ಬೆಂಗಳೂರಿನಲ್ಲಿ ಎರಡು(ಶೂಟಿಂಗ್, ಜಿಮ್ನಾಸ್ಟಿಕ್) ಕ್ರೀಡೆಗಳನ್ನು ನಡೆಸಲಾಗುತ್ತದೆ.* ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಕ್ರೀಡಾಕೂಟ ಆಯೋಜಿಸಲಾಗುತ್ತದೆ. * ಸುಮಾರು 25 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು, ಕ್ರೀಡಾಕೂಟದಲ್ಲಿ 3,750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಜನರು ಭಾಗವಹಿಸಲಿದ್ದಾರೆ.