* ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗುಜರಾತ್ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಫೆಬ್ರುವರಿ 07 ರಂದು ಶಿಫಾರಸು ಮಾಡಿದೆ.
* ಪ್ರಸ್ತುತ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಕರ್ನಾಟಕದವರೇ ಆದ ಪಿ.ಎಸ್.ದಿನೇಶ್ ಕುಮಾರ್ ಅವರು ಫೆಬ್ರುವರಿ 24ರಂದು ನಿವೃತ್ತಿ ಆಗಲಿದ್ದಾರೆ. ಅವರಿಂದ ತೆರವಾಗುವ ಹುದ್ದೆಗೆ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.
* ಜಸ್ಟಿಸ್ ಅಂಜಾರಿಯಾ ಅವರು 21 ನವೆಂಬರ್ 2011 ರಂದು ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು ಅಂದಿನಿಂದ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
* ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆಯುವ ಮುನ್ನ ಗುಜರಾತ್ ಹೈಕೋರ್ಟ್ ನಲ್ಲಿ ಸಿವಿಲ್, ಸಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ವಕೀಲಿಕೆ ಮಾಡಿದ್ದರು. ಹಾಗೂ ಸಿವಿಲ್ ಮತ್ತು ಸಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣಿತಿ ಹೊಂದಿದ್ದಾರೆ ಎಂದು ಕೊಲಿಜಿಯಂ ತಿಳಿಸಿದೆ.
* ಜನವರಿ 19 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಪಿ ಬಿ ವರಾಳೆ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಗುರುವಾರ, 08 ಫೆಬ್ರುವರಿ 2024
11:36 ಪೂರ್ವಾಹ್ನ
Daily PDF
ಕರ್ನಾಟಕ ಹೈಕೋರ್ಟ್ಗೆ ನೂತನ ಮುಖ್ಯ ನ್ಯಾಯಾಮೂರ್ತಿಯಾಗಿ ಎನ್.ವಿ ಅಂಜಾರಿಯಾ ನೇಮಕ
Authored by:
Akshata Halli