* ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 10 ರಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
* 1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರು ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದರು. ಆ ಸಂದರ್ಭದಲ್ಲಿ ಎಸ್​ಎಂ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್​​ಗೆ ಶಕ್ತಿ ತುಂಬಿತ್ತು.
* ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್ಎಂ ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ)  ಅವರು ಬೆಂಗಳೂರಿನಲ್ಲಿ ನಿಧನರಾದ್ದಾರೆ. ಎಸ್​ಎಂ ಕೃಷ್ಣ ಅವರ ಜೀವನಚರಿತ್ರೆ ‘ಸ್ಮೃತಿ ವಾಹಿನಿ’ 2019ರ ಡಿಸೆಂಬರ್​​ನಲ್ಲಿ ಲೋಕಾರ್ಪಣೆಗೊಂಡಿತು.
* ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾದ ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
* ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು.
* ಎಸ್.ಎಂ.ಕೃಷ್ಣ ಅವರ ಬದುಕಿನ ಹಾದಿ : 
- 1932(ಮೇ 1) : ಜನನ 
- 1962 : ವಿಧಾನಸಭೆ ಸದಸ್ಯ
- 1968 : ಲೋಕಸಭೆ ಸದಸ್ಯ
- 1972 ವಿಧಾನ ಪರಿಷತ್‌ ಸದಸ್ಯ- ಕೈಗಾರಿಕಾ ಸಚಿವ
- 1980: ಲೋಕಸಭೆ ಸದಸ್ಯ-ಕೇಂದ್ರ ಕೈಗಾರಿಕೆ ಮತ್ತು ಹಣಕಾಸು ಖಾತೆ ರಾಜ್ಯ ಸಚಿವ
- 1989: ವಿಧಾನಸಭಾಧ್ಯಕ್ಷ
- 1992-94: ಉಪಮುಖ್ಯಮಂತ್ರಿ  
- 1996: ರಾಜ್ಯಸಭಾ ಸದಸ್ಯ
- 1999 : ಕೆಪಿಸಿಸಿ ಅಧ್ಯಕ್ಷ 
- 1999-2004: ಮುಖ್ಯಮಂತ್ರಿ 
- 2004-08 ಮಹಾರಾಷ್ಟ್ರರಾಜ್ಯಪಾಲ
- 2009: ರಾಜ್ಯಸಭಾ ಸದಸ್ಯ- ವಿದೇಶಾಂಗ ಸಚಿವ
- 2017: ಕಾಂಗ್ರೆಸ್ ಗೆ ರಾಜೀನಾಮೆ- ಬಿಜೆಪಿ ಸೇರ್ಪಡೆ
- 2023 : ಸಕ್ರಿಯ ರಾಜಕಾರಣದಿಂದ ನಿವೃತ್ತಿ