* ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷೆಯಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
* ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿಯಾದ ಸೌಮ್ಯ ರೆಡ್ಡಿ ಒಂದು ಅವಧಿಗೆ ಜಯನಗರ ಕ್ಷೇತ್ರದ ಶಾಸಕಿಯಾಗಿದ್ದರು.
* 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದು ಬಿಜೆಪಿಯ ಹಾಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸೋಲು ಕಂಡಿದ್ದರು.
* ಎಐಸಿಸಿ ಮೂರು ರಾಜ್ಯಗಳ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಸೌಮ್ಯಾ ರೆಡ್ಡಿ ನೇಮಕದ ಪ್ರಸ್ತಾವನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.
* ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ, ಕಮಲಾಕ್ಷಿ ರಾಜಣ್ಣ, ವೀಣಾ ಕಾಶಪ್ಪನವರ, ಕೃಪಾ ಆಳ್ವ, ಐಶ್ವರ್ಯಾ ಮಹಾದೇವ್ ಹೆಸರುಗಳು ಮುಂಚೂಣಿಯಲ್ಲಿದ್ದವು.
* ಪುಷ್ಪಾ ಅಮರನಾಥ್ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿದ್ದರು. ಲೋಕಸಭೆ ಚುನಾವಣೆಗೂ ಮೊದಲೇ ಅವರ ಅಧಿಕಾರಾವಧಿ ಪೂರ್ಣಗೊಂಡಿತ್ತು. ಸದ್ಯ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರಾಜ್ಯ ಮಟ್ಟದ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಆದ್ದರಿಂದ ರಾಜ್ಯ ಮಹಿಳಾ ಘಟಕಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
* ಬೆಂಗಳೂರಿನ ಆರ್. ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ವಿಷಯದಲ್ಲಿ ಸೌಮ್ಯಾ ರೆಡ್ಡಿ ಪದವಿ ಪಡೆದಿದ್ದಾರೆ. ನ್ಯೂಯಾರ್ಕ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪರಿಸರ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
* 2014ರಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿದ್ದರು. ರಾಜಕೀಯದತ್ತ ಬಂದ ಅವರು 2016ರಲ್ಲಿ ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಮತ್ತು 2017ರಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದರು. 2019ರಲ್ಲಿ ಎಐಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಬುಧವಾರ, 14 ಆಗಸ್ಟ್ 2024
12:16 ಅಪರಾಹ್ನ
Daily PDF
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ
Authored by:
Jyoti Angadi