* ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿ ಪ್ರಾಕೃತಿಕ ವಿಪತ್ತು ತಗ್ಗಿಸುವಿಕೆ ಮತ್ತು ಸಾಮರ್ಥ್ಯ ವೃದ್ಧಿ ಯೋಜನೆಗಳಿಗಾಗಿ 1000 ಕೋಟಿ ರೂ ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವಾಲಯ ನವೆಂಬರ್ 26 ರಂದು ಅನುಮೋದನೆ ನೀಡಿದೆ. * ಕರ್ನಾಟಕ ಸೇರಿದಂತೆ ಒಟ್ಟು 15 ರಾಜ್ಯಗಳಲ್ಲಿ ವಿವಿಧ ವಿಪತ್ತು ಪರಿಹಾರ ಮತ್ತು ನಾಗರಿಕ ರಕ್ಷಣಾ ಸ್ವಯಂಸೇವಕರ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಯೋಜನೆಗೆ ಒಟ್ಟು 1115 ಕೋಟಿ ರೂಪಾಯಿ ಹಣವನ್ನು ಮೋದಿ ಸರ್ಕಾರ ಬಿಡುಗಡೆ ಮಾಡಿದೆ.* ಸಾಮರ್ಥ್ಯ ವೃದ್ಧಿಗಾಗಿ 115.67 ಕೋಟಿ ರೂಪಾಯಿ ವೆಚ್ಚದ ಮತ್ತೊಂದು ಯೋಜನೆಯನ್ನು ಸಮಿತಿ ಅನಿಮೋದಿಸಿದೆ. ನವೆಂಬರ್ 26 ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.* ಎನ್ಡಿಎ ಸರ್ಕಾರವಿರುವ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ ತಲಾ 139 ಕೋಟಿ ರೂ. ಹಾಗೂ ಮಹಾರಾಷ್ಟ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ನೀಡಲಾಗಿದೆ. ಇನ್ನು ವಿರೋಧ ಪಕ್ಷಗಳು ಇರುವ ಕರ್ನಾಟಕ ಮತ್ತು ಕೇರಳಕ್ಕೆ ತಲಾ 72 ಕೋಟಿ ರೂ. ನೀಡಿದ್ದರೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ತಲಾ 50 ಕೋಟಿ ರೂ. ಹಂಚಿಕೆ ಮಾಡಿದೆ.* ಇನ್ನು ಎಂಟು ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರಕ್ಕೆ 378 ಕೋಟಿ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ.