* ಇಡೀ ಅರಣ್ಯ ಇಲಾಖೆಗೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಹಿರಿಯ ಐಎಫ್ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಈಗ ಕರ್ನಾಟಕದ ಅರಣ್ಯ ಪಡೆಗಳ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.
* ಈ ಉನ್ನತ ಹುದ್ದೆಗೇರಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
* ಹಿರಿಯ ಐಎಫ್ಎಸ್ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ ಉತ್ತರಾಖಂಡದವರು. 1989ರ ಬ್ಯಾಚ್ನ ಐಎಫ್ಎಸ್ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಆರಂಭದಲ್ಲೇ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡರು.
* ಕರ್ನಾಟಕ ಕೇಡರ್ನ ಅಧಿಕಾರಿಯಾಗಿ 35 ವರ್ಷಗಳಿಂದ ಅವರು ಸೇವೆ ಸಲ್ಲಿಸುತ್ತಿದ್ದಾರೆ.
* ಕರ್ನಾಟಕ ಅರಣ್ಯ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಕುರಿತು ಉನ್ನತ ಮಟ್ಟದ ಸಮಿತಿ ಸಭೆ ಸೇರಿ ತೀರ್ಮಾನಿಸಲಾಗಿತ್ತು. ಬಳಿಕ ಕೇಂದ್ರ ಸರ್ಕಾರಕ್ಕೂ ವರದಿ ಸಲ್ಲಿಸಲಾಗಿದೆ. ಆದಾದ ಬಳಿಕ ಮೀನಾಕ್ಷಿ ನೇಗಿ ಅವರನ್ನು ಕೇಂದ್ರ ಸರ್ಕಾರದ ಸೇವೆಯಿಂದ ಬಿಡುಗಡೆ ಮಾಡಲಾಗಿತ್ತು.
ಕರ್ನಾಟಕದ ಅರಣ್ಯ ಇಲಾಖೆಯ ಮೊದಲ ಮಹಿಳಾ ಮುಖ್ಯಸ್ಥರಾಗಿ ಮೀನಾಕ್ಷಿ ನೇಗಿ ನೇಮಕ
Published by Siddaram Halli
21 ಫೆಬ್ರವರಿ 2025