* ಕರ್ನಾಟಕದಲ್ಲಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರುಡು ಅಧಿಸೂಚನೆಯನ್ನು ತಿರಸ್ಕರಿಸಲು ಸರ್ಕಾರ ನಿರ್ಧರಿಸಿದೆ.   
* ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು (Kasturi Rangan Report) ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
*  ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರವು 2024ರ ಜುಲೈ 31ರಂದು ಆರನೇ ಕರುಡು ಅಧಿಸೂಚನೆಯನ್ನು ಹೊರಡಿಸಿತ್ತು. 60 ದಿನಗಳಲ್ಲಿಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸವಂತೆ ರಾಜ್ಯಗಳಿಗೆ ಸೂಚಿಸಿತ್ತು.    
* ಕಸ್ತೂರಿ ರಂಗನ್‍ ಸಮಿತಿ ವರದಿ ಹೀಗಿದೆ : ಕಸ್ತೂರಿ ರಂಗನ್‍ ಸಮಿತಿಯು ಪಶ್ಚಿಮ ಘಟ್ಟ ವ್ಯಾಪ್ತಿಯ 59,949 ಚದರ ಕಿಮಿ. ವ್ಯಾಪ್ತಿಯ ಪ್ರದೇಶ ಅಂದರೆ ಶೇಕಡಾ 36.4ರಷ್ಚು ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಒಳಪಡುತ್ತದೆ ಎಂದು ಗುರುತಿಸಿದೆ. ಈ ಪ್ರದೇಶಗಳಲ್ಲಿ ಗಣಿಗಾರಿಕೆ, ಜಲವಿದ್ಯುತ್, ಕ್ವಾರಿ, ಮರಳುಗಾರಿಕೆ ಪರಿಸರ ವಿರೋಧಿ ಕೈಗಾರಿಕೆ, ಪವನ ವಿದ್ಯುತ್ ಯೋಜನೆಗಳನ್ನು ಸಂಪೂರ್ಣ ನಿಷೇಧಿಸಬೇಕು. 20,000 ಚ,ಮೀ, ಬೃಹತ್​ ಆದ ಯಾವುದೇ ಕಟ್ಟಡ ನಿರ್ಮಿಸುವ ಹಾಗಿಲ್ಲ. ಇಎಸ್ಎನಿಂದ 10ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸುವುದಾದರೇ ಪರಿಸರ ಇಲಾಖೆ, ಸ್ಥಳೀಯ ಗ್ರಾಮಸಭೆ ಅನುಮತಿ ಪಡೆಯಬೇಕು. ಈ ಪ್ರದೇಶದಲ್ಲಿ ಸಿಮೆಂಟು, ಕಲ್ಲು, ರಸಾಯನಿಕ ಬಳಸಲು, ಜನವಸತಿ ನಿರ್ಮಿಸಲು ಯಾವುದೇ ಅವಕಾಶವಿಲ್ಲ.