* ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್ ಸಂಸ್ಥಾಪಕ 88 ವರ್ಷದ ರಾಮೋಜಿ ರಾವ್ ಅವರು ವಯೋಸಹಜ ಕಾಯಿಲೆಯಿಂದ ಹೈದರಾಬಾದ್ ನ ಸ್ಟಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
* ಸದ್ಯ ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನೆ ಮಾಡಲಾಗಿದೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ರಾಮೋಜಿ ರಾವ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.
* ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮೋಜಿ ರಾವ್ ಅವರು ವಿಶ್ವದ ಅತಿದೊಡ್ಡ ಥೀಮ್ ಪಾರ್ಕ್ ಮತ್ತು ಫಿಲ್ಮ್ ಸ್ಟುಡಿಯೋ, ರಾಮೋಜಿ ಫಿಲ್ಮ್ ಸಿಟಿಯನ್ನು ಸ್ಥಾಪಿಸಿದರು.
* ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ.
ಸೋಮವಾರ, 10 ಜೂನ್ 2024
4:04 ಅಪರಾಹ್ನ
Daily PDF
ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ
Authored by:
Yallamma G