* ಕೇಂದ್ರ ಚುನಾವಣಾ ಆಯೋಗ ಅಕ್ಟೊಬರ್ 15 ರಂದು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ದಿನಾಂಕ ಘೋಷಣೆ ಮಾಡಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಘೋಷಿಸಿದ್ದಾರೆ.
* ಮಹಾರಾಷ್ಟ್ರದಲ್ಲಿ 1 ಹಂತದಲ್ಲಿ 288 ಕ್ಷೇತ್ರಗಳಿಗೆ ನವೆಂಬರ್ 20 ರಂದು ವಿಧಾನಸಭೆಗೆ ಮತದಾನ ನಡೆಯಲಿದೆ.
* ಜಾರ್ಖಂಡ್ ನಲ್ಲಿ 2 ಹಂತಗಳಲ್ಲಿ 81 ಕ್ಷೇತ್ರಗಳಿಗೆ ನವೆಂಬರ್ 13 ರಂದು ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನ ನವೆಂಬರ್ 20 ರಂದು ಮತದಾನ ಜರುಗಲಿದೆ. ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.
* ಇತ್ತೀಚೆಗೆ ಪೂರ್ಣಗೊಂಡ ಹರ್ಯಾಣದ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗಳಲ್ಲಿ ಯಾವುದೇ ಉಪಚುನಾವಣೆಗಳು ಇಲ್ಲ ಎಂದು ಮುಖ್ಯ ಆಯುಕ್ತರು ಘೋಷಿಸಿದ್ದಾರೆ.
* ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಶಾಸಕರಿಂದ ತೆರವುಗೊಂಡ ಕರ್ನಾಟಕದ 3 ಕ್ಷೇತ್ರಗಳು ಸೇರಿದಂತೆ 47 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ನವೆಂಬರ್ 13 ರಂದು ಮತದಾನ ನಡೆಯಲಿದೆ.
* ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ಸಹ ನವೆಂಬರ್ 13ರಂದು ನಡೆಯಲಿದೆ.
* ರಾಜ್ಯದ 3 ಕ್ಷೇತ್ರಗಳಾದ ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಶಿಗ್ಗಾಂವಿ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹಾವೇರಿಯಿಂದ, ಚನ್ನಪಟ್ಟಣ ಶಾಸಕರಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಪ್ರವೇಶಿಸಿದ್ದಾರೆ.
ಬುಧವಾರ, 16 ಅಕ್ಟೋಬರ್ 2024
12:41 ಅಪರಾಹ್ನ
Daily PDF
'ಮಹಾರಾಷ್ಟ್ರ-ಜಾರ್ಖಂಡ' ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿ; ಉಪಚುನಾವಣೆಗೂ ವೇಳಾಪಟ್ಟಿ ಪ್ರಕಟ
Authored by:
Jyoti Angadi