* ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್ 2023 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ನಿನ್ನೆ (ಶನಿವಾರ) ಹೊಸ ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳೆಯರು ಚಿನ್ನದ ಸಾಧನೆ ತೋರಿದ್ದಾರೆ.
* ವರ್ಲ್ಡ್ ಬ್ಲೈಂಡ್ ಗೇಮ್ಸ್ ಅಂತಾರಾಷ್ಟ್ರೀಯ ಬಹುಕ್ರೀಡಾ ಕಾರ್ಯಕ್ರಮವಾಗಿದ್ದು, ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುತ್ತದೆ. ಇಂಟರ್‌ನ್ಯಾಷನಲ್ ಬ್ಲೈಂಡ್ ಸ್ಪೋರ್ಟ್ಸ್ ಫೆಡರೇಶನ್ (ಐಬಿಎಸ್‌ಎ) ಆಯೋಜಿಸುತ್ತದೆ.
* ನಡೆಯುವ ಕ್ರೀಡೆಗಳಲ್ಲಿ ಅಂಧ ಮತ್ತು ಭಾಗಶಃ ದೃಷ್ಟಿ ಹೊಂದಿರುವ ಕ್ರೀಡಾಪಟುಗಳು ಸ್ಪರ್ಧಿಸಲು ಅನುವು ಮಾಡಿಕೊಡಲಾಗುತ್ತದೆ.1998ರಲ್ಲಿ ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿ ಮೊದಲ ಕ್ರೀಡಾಕೂಟ ನಡೆದಿತ್ತು.
ಮಹಿಳಾ ಅಂಧರ ಕ್ರಿಕೆಟ್ ತಂಡಕ್ಕೆ ಚಿನ್ನ
Published by Tajabi Pathan
26 ಆಗಸ್ಟ್ 2023