* ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ಝೆಡ್‌ಪಿಎಂ) ಪಕ್ಷ 27 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ.
* ಆಡಳಿತರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ.
* 2019ರಲ್ಲಿ ಚುನಾವಣಾ ಆಯೋಗದಲ್ಲಿ ನೋಂದಾವಣೆಗೊಂಡ ಹೊಸ ಪಕ್ಷ ಝೆಡ್‌ಪಿಎಂ, ಕೆಲವೇ ವರ್ಷಗಳಲ್ಲಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವಷ್ಟು ಸ್ಥಾನಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದೆ.
* ಈ ಪಕ್ಷದ ಸ್ಥಾಪಕ 73 ವರ್ಷದ ಲಾಲ್ದುಹೋಮಾ ಮಿಜೋರಾಂನ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಖ ಖಚಿತವಾಗಿದೆ. ಲಾಲ್ದುಹೋಮಾ ಅವರು ಪ್ರತಿಸ್ಪರ್ಧಿ ಎಂಎನ್‌ಎಫ್ ಪಕ್ಷದ ಅಭ್ಯರ್ಥಿ ವಿರುದ್ಧ 2,982 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ಮಿಜೋರಾಂ CM ಪಟ್ಟಕ್ಕೇರಲು ಲಾಲ್ದುಹೋಮಾ ಸಜ್ಜು
Published by Tajabi Pathan
05 ಡಿಸೆಂಬರ್ 2023