* ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್ 2024 ರ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಚೀನಾದ ವಾಂಗ್ ಝಿಯಿ ಅವರ ವಿರುದ್ಧ ಸೋತು ನಿರಾಸೆ ಮೂಡಿಸಿದ್ದಾರೆ.
* ಮೇ 25 ರಂದು (ಶನಿವಾರ) ನಡೆದಿದ್ದ ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರ ವಿರುದ್ಧ ಪಿ.ವಿ ಸಿಂಧು ಅವರು 13-21, 21-16, 21-12 ಸೆಟ್‌ಗಳಿಂದ ಗೆಲುವು ಸಾಧಿಸಿದ್ದರು. ಇದಕ್ಕೂ ಮುನ್ನ ವಿಶ್ವದ 6ನೇ ಶ್ರೇಯಾಂಕಿತ ಆಟಗಾರ್ತಿಯಾದ ಚೀನಾದ ಹಾನ್ ಯೂ ಅವರನ್ನ ಕ್ವಾರ್ಟರ್ ಫೈನಲ್‌ನಲ್ಲಿ ಸೋಲಿಸಿದ್ದರು.
* ಸಿಂಧು ಅವರು 2022 ರ ಸಿಂಗಾಪುರ್ ಓಪನ್ ಪ್ರಶಸ್ತಿ ಗೆದ್ದಿದ್ದರು ಮತ್ತು ಕಳೆದ ವರ್ಷ ಮ್ಯಾಡ್ರಿಡ್ ಸ್ಪೇನ್ ಮಾಸ್ಟರ್ಸ್‌ನಲ್ಲಿ ರನ್ನರ್ ಅಪ್ ಆಗಿದ್ದರು.
* ಎರಡು ವರ್ಷಗಳಿಂದ ಪ್ರಶಸ್ತಿ ಗೆಲ್ಲದ ಐದನೇ ಶ್ರೇಯಾಂಕದ ಸಿಂಧು ಅವರು ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್‌ನಲ್ಲಿ ಮುಕ್ತಾಯಗೊಳ್ಳಲು 88 ನಿಮಿಷಗಳ ಕಾಲ ನಡೆದ ಮ್ಯಾರಥಾನ್ ಸೆಮಿಫೈನಲ್‌ನಲ್ಲಿ ವಿಶ್ವದ 20 ನೇ ಶ್ರೇಯಾಂಕಿತ ಬುಸಾನನ್ ಅವರ ವಿರುದ್ಧ 13-21 21-16 21-12 ರ ಮೇಲುಗೈ ಸಾಧಿಸಿದರು.
ಸೋಮವಾರ, 27 ಮೇ 2024
11:54 ಪೂರ್ವಾಹ್ನ
Daily PDF
ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ : ಚೀನಾದ ವಾಂಗ್ ಝಿಯಿ ವಿರುದ್ಧ ಸೋತ ಪಿ.ವಿ ಸಿಂಧು
Authored by:
Bhagya R K