* ವಿಜಯಪುರದ ಮಮದಾಪುರ ಗ್ರಾಮ ಪಂಚಾಯಿತಿಯ 1,494.38 ಎಕರೆ ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪರಂಪರೆಯ ತಾಣ ಎಂದು ಘೋಷಿಸಿ ರಾಜ್ಯ ಸರ್ಕಾರ ಅಕ್ಟೋಬರ್ 16 ರಂದು (ಬುಧವಾರ) ಅಧಿಸೂಚನೆ ಹೊರಡಿಸಿದೆ.
* ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು, ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ.
* ಶ್ರೀಗಳ ಸ್ಮರಣಾರ್ಥ ಅವರ 2ನೇ ಪುಣ್ಯ ಸ್ಮರಣೆಯ ದಿನವಾದ ಜನವರಿ 2ರಂದು ವಿಜಯಪುರದಲ್ಲಿ ವಿಧ್ಯುಕ್ತವಾಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಫಲಕವನ್ನು ಅನಾವರಣ ಮಾಡಲಾಗುವುದು ಎಂದು ತಿಳಿಸಿದರು.
* ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶೇ.5ರಷ್ಟು ಅರಣ್ಯ ಪ್ರದೇಶವಿದ್ದು, ವಿಜಯಪುರದಲ್ಲಿ ಶೇ.1ಕ್ಕಿಂತ ಕಡಿಮೆ ಇದೆ. ಸರ್ಕಾರ ಈ ಘೋಷಣೆಯು ಹಸಿರು ಹೊದಿಕೆಯ ಸಂರಕ್ಷಣೆಯನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದರು.
* ಮಮದಾಪುರ ಭಾಗದಲ್ಲಿನ ಅರಣ್ಯ ಪ್ರದೇಶಗಳ ಅಧಿಸೂಚನೆಯಾಗಿದ್ದು, ಪ್ರಸ್ತುತ ಸುಮಾರು 1494 ಎಕರೆ 38 ಗುಂಟೆ ವಿಸ್ತೀರ್ಣದ ಅರಣ್ಯವಿದೆ. ಪ್ರಾಣಿಸಂಕುಲ, ಪಕ್ಷಿ ಸಂಕುಲ, ಕೀಟ ಸಂಕುಲ ಮತ್ತು ಸಸ್ಯ ಸಂಕುಲದಿಂದ ಕೂಡಿರುವ ಶ್ರೀಮಂತ ಜೀವವೈವಿಧ್ಯತೆಯ ಈ ತಾಣಕ್ಕೆ ಸಿದ್ದೇಶ್ವರ ಸ್ವಾಮೀಜಿ ಜೀವವೈವೀಧ್ಯ ಪಾರಂಪರಿಕ ತಾಣ ಎಂದು ಜೀವವೈವಿಧ್ಯ ಕಾಯಿದೆ 2022ರ ಸೆಕ್ಷನ್ 37ರನ್ವಯ ಮರು ನಾಮಕರಣ ಮಾಡಲಾಗುತ್ತಿದೆ.
* ಮಮದಾಪುರದ ಅಧಿಸೂಚಿತ ಅರಣ್ಯ ಎಲೆ ಉದುರುವ ಕಾಡು ಮತ್ತು ಕುರುಚಲು ಕಾಡುಗಳಿಂದ ಕೂಡಿದ ಪ್ರದೇಶವಾಗಿದ್ದು, ಚಿರತೆಗಳು, ನರಿಗಳು, ಕತ್ತೆ ಕಿರುಬಗಳು ಮತ್ತು ಹಲವಾರು ಪ್ರಭೇದದ ಪಕ್ಷಿಗಳ ತಾಣವಾಗಿದೆ. ಸಸ್ಯ ಸಂಕುಲ, ಕೀಟ ಸಂಕುಲದ ನೆಲೆವೀಡೂ ಆಗಿದೆ.
ಮಮದಾಪುರ ಅರಣ್ಯಕ್ಕೆ 'ಸಿದ್ದೇಶ್ವರ ಸ್ವಾಮಿ ಜೀವವೈವಿಧ್ಯ ಪಾರಂಪರಿಕ ತಾಣ' ಎಂದು ಮರುನಾಮಕರಣ
Published by Bhagya R K
18 ಅಕ್ಟೋಬರ್ 2024