* ಮಂಗನಕಾಯಿಲೆ ಇರುವ ಬಿಪಿಲ್ ಕಾರ್ಡ್‌ದಾರರಿಗೆ ಒದಗಿಸಲಾಗುವ ಉಚಿತ ಚಿಕಿತ್ಸೆಯನ್ನು ಇದೀಗ ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
* ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ- ಮಂಗನ ಕಾಯಿಲೆ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.
* ರೋಗದಿಂದ ಬಾಧಿತ ಬಿಪಿಎಲ್ ಕಾರ್ಡ್‌ದಾರರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ.
* ರಾಜ್ಯದಲ್ಲಿ ಮಂಗನಕಾಯಿಲೆಯಿಂದ ಬಾಧಿತರಾದ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ ಎಂದ ಹೇಳಿದ್ದಾರೆ.
* ಒಂದೇ ದಿನ ಚಿಕ್ಕಮಗಳೂರಲ್ಲಿ ನಾಲ್ವರಿಗೆ ಮಂಗನಕಾಯಿಲೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ರಾಜ್ಯದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದೆ ಎಂಬುದಾಗಿ ವರದಿಯಾಗಿತ್ತು.
* ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗನ ಕಾಯಿಲೆಗೆ ಬಾಧಿತ ಎಪಿಎಲ್ ಕಾರ್ಡ್ದಾರರಿಗೂ ಉಚಿತ ಚಿಕಿತ್ಸೆ
Published by Jyoti Angadi
17 ಫೆಬ್ರವರಿ 2025