* ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವಿನ ಸೆಮಿ ಹೈಸ್ಪೀಡ್ ರೈಲನ್ನು ಚಲಾಯಿಸಿದ ದೇಶದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಏಷ್ಯಾದ ಮೊದಲ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೇಂದ್ರ ರೈಲ್ವೆ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.
* ತಮ್ಮ ಸಾಧನೆಗಳಿಗಾಗಿ ಅವರು ಅನೇಕ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂನ್ 9 ರಂದು ನವದೆಹಲಿಯಲ್ಲಿ ನಡೆಯಲಿದೆ. ಯಾದವ್ ಅವರು ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್ ಆಗಿದ್ದಾರೆ.
* ಪಶ್ಚಿಮ ಮಹಾರಾಷ್ಟ್ರ ಪ್ರದೇಶದ ಸತಾರಾದಿಂದ ಬಂದ ಯಾದವ್ ಅವರು 1988 ರಲ್ಲಿ ಭಾರತದ ಮೊದಲ ಮಹಿಳಾ ರೈಲು ಚಾಲಕರಾದರು.
ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲಿರುವ ಏಷ್ಯಾದ ಮೊದಲ ಲೋಕೋ ಪೈಲಟ್ ಸುರೇಖಾ ಯಾದವ್
Published by Yallamma G
08 ಜೂನ್ 2024