* ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ಅವಧಿ ಮುಕ್ತಾಯವಾಗಿದ್ದು, ಸದ್ಯದಲ್ಲೇ ಹೊಸ ಚುನಾವಣಾ ಆಯುಕ್ತರ ನೇಮಕವಾಗಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಮಂಗಳವಾರ ಅಧಿಕಾರದಿಂದ ನಿವೃತ್ತಿಯಾಗಲಿದ್ದಾರೆ.
* ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ಮತ್ತು ಬಹುಶಃ 2026 ರಲ್ಲಿ ಬಂಗಾಳ, ತಮಿಳುನಾಡಿನಲ್ಲಿ ಮತ್ತು ಅಸ್ಸಾಂ ಮತ್ತು ಕೇರಳದಲ್ಲಿಯೂ ಚುನಾವಣೆಗಳನ್ನು ನೋಡಿಕೊಳ್ಳುವ ಹೊಸ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಶೀಘ್ರದಲ್ಲೇ ನಡೆಯಲಿದೆ. ಕುಮಾರ್ ಅವರನ್ನು ಮೇ 2022 ರಲ್ಲಿ ಸಿಇಸಿ ಆಗಿ ನೇಮಿಸಲಾಯಿತು.
* 2022 ರಲ್ಲಿ ರಾಷ್ಟ್ರಪತಿ ಚುನಾವಣೆಯನ್ನು ನಡೆಸಿದ್ದಾರೆ. 2023 ರಲ್ಲಿ ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಚುನಾವಣೆಗಳ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜೀವ್ ಕುಮಾರ್ ನಂತರ ಜ್ಞಾನೇಶ್ ಕುಮಾರ್ ಅತ್ಯಂತ ಹಿರಿಯ ಚುನಾವಣಾ ಆಯುಕ್ತರಾಗಿದ್ದಾರೆ.
* ಇವರ ಅಧಿಕಾರಾವಧಿಯು ಜನವರಿ .26, 2029ರವರೆಗೆ ಇದೆ. ಸುಖಬೀರ್ ಸಿಂಗ್ ಸಂಧು ಇತರರು ಚುನಾವಣಾ ಆಯುಕ್ತರಾಗಿದ್ದು, ಇವರ ಹೆಸರು ಮುನ್ನಲೆಗೆ ಬಂದಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಅವಧಿ ಮುಕ್ತಾಯ
Published by Jyoti Angadi
15 ಫೆಬ್ರವರಿ 2025