* ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ (ಕೆಎಂಎಫ್) ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ವತಿಯಿಂದ ‘ನಂದಿನಿ’ ವಿವಿಧ ಶ್ರೇಣಿಯ ಹಾಲು ಹಾಗೂ ಇತರ ಉತ್ಪನ್ನಗಳ ಮಾರಾಟಕ್ಕೆ ನವದೆಹಲಿಯಲ್ಲಿ ಚಾಲನೆ ನೀಡಲಾಯಿತು. * ಭಾರತ ದೇಶದಲ್ಲೆ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. * ಕರ್ನಾಟಕ ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. * ರೈತರಿಂದ ಲೀ.ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೊತ್ಸಾಹಧನವನ್ನು ನೀಡುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು. * ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. * ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ.* ರಾಜ್ಯವು ಪ್ರತಿನಿತ್ಯ 92-93 ಲಕ್ಷ ಲೀಟರ್ ಹಾಲನ್ನು ಉತ್ಪಾದಿಸುತ್ತಿದ್ದು, ಅದರಲ್ಲಿ 2.5 ಲಕ್ಷ ಲೀಟರ್ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಕ್ಕೆ ಕಳುಹಿಸಲಾಗುತ್ತಿದೆ ಎಂದರು.