* ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 8ರಂದು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಬಳಿಕ ಸತತ ಮೂರು ಬಾರಿ ಪ್ರಧಾನಿಯಾದ ಹೆಗ್ಗಳಿಕೆ ಮೋದಿಯವರಿಗೆ ಸಲ್ಲುತ್ತದೆ.
* ರಾಷ್ಟ್ರಪತಿ ಭವನದ ಆವರಣದಲ್ಲಿಯೇ 2014ರಲ್ಲಿ ಮತ್ತು 2019ರಲ್ಲಿಯೂ ಮೋದಿಯವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬಾರಿಯೂ ರಾಷ್ಟ್ರಪತಿ ಭವನದ ಆವರಣದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.
* ಪ್ರಧಾನಿ ಮೋದಿಯವರು ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, 1,52,513 ಮತಗಳ ಅಂತರದಿಂದ ಕಾಂಗ್ರೆಸ್‌ನ ಅಜಯ್ ರೈ ಅವರನ್ನು ಮಣಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟವು ಒಟ್ಟು 293 ಸ್ಥಾನಗಳಲ್ಲಿ ಗೆದ್ದಿದ್ದು, ಜೂನ್ 8ರಂದು ಟಿಡಿಪಿ ಮತ್ತು ಜೆಡಿಯು ಬೆಂಬಲದೊಂದಿಗೆ ಸರಕಾರ ರಚಿಸಲಿದೆ.
ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ
Published by Bhagya R K
06 ಜೂನ್ 2024