* ಶಾಸಕರು, ಸಚಿವರವೇಶವ, ಹಾಗೂ ಭತ್ಯೆ ಹೆಚ್ಚಿಸುವ ಮಸೂದೆಗಳೂ ಸೇರಿ ಒಟ್ಟು ನಾಲ್ಕು ಮಸೂದೆಗಳಿಗೆ ರಾಜ್ಯಪಾಲ ತಾವರಚಂದ್ ಗೆಹಲೋತ್ ಅಂಕಿತ ಹಾಕಿದ್ದಾರೆ.
* 'ಕರ್ನಾಟಕ ಗ್ರಾಮ ಹುದ್ದೆಗಳ ರದ್ದತಿಗೆ ಸಂಬಂಧಿಸಿದ (ತಿದ್ದುಪಡಿ) ಮಸೂದೆ–2025', 'ಕರ್ನಾಟಕ ಮಂತ್ರಿಗಳ ಸಂಬಳ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ–2025', 'ಕರ್ನಾಟಕ ವಿಧಾನಮಂಡಳದ ಸಂಬಳ, ನಿವೃತ್ತಿ ವೇತನ ಹಾಗೂ ಭತ್ಯೆಗಳ (ತಿದ್ದುಪಡಿ) ಮಸೂದೆ–2025' ರಾಜ್ಯಪತ್ರದಲ್ಲಿ ಪ್ರಕಟವಾಗಿದ್ದು, ಇವು ಇದೀಗ ಕಾನೂನಾಗಿ ಜಾರಿಗೆ ಬಂದಿವೆ.
* 'ವಾಹನಗಳ ತೆರಿಗೆ ನಿಗದಿಗೆ ಸಂಬಂಧಿಸಿದ (ತಿದ್ದುಪಡಿ) ಮಸೂದೆ–2025' ಗೆ ರಾಜ್ಯಪಾಲರು ಅಂಗೀಕಾರ ನೀಡಿ ಸಹಿ ಹಾಕಿದ್ದಾರೆ. ಈ ಕಾಯ್ದೆಯು ರಾಜ್ಯಪತ್ರದಲ್ಲಿ ಪ್ರಕಟಗೊಂಡು ಜಾರಿಗೆ ಬಂದಿದೆ.
* 'ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ಕ್ಕೆ ಕುಲಪತಿ ನೇಮಕ ಪ್ರಕ್ರಿಯೆ ವಿಳಂಬವಾಗಿದ್ದು, ಮುಂದಿನ ಒಂದು ತಿಂಗಳಲ್ಲಿ ಕುಲಪತಿಯನ್ನು ನೇಮಕ ಮಾಡಬೇಕೆಂದು ರಾಜ್ಯಪಾಲರು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
ನಾಲ್ಕು ಮಸೂದೆಗಳಿಗೆ ರಾಜ್ಯಪಾಲರಿಂದ ಅಂಕಿತ
Published by Jyoti Angadi
05 ಏಪ್ರಿಲ್ 2025