* 'ಸ್ವಚ್ಛ ಭಾರತ' ಅಭಿಯಾನಕ್ಕೆ 10 ವರ್ಷ ತುಂಬಿದ ಸಂದರ್ಭದಲ್ಲಿ ಈ ಅಭಿಯಾನದ ಮುಂದಿನ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು 'ಮಿಷನ್ ಅಮೃತ' ಯೋಜನೆಯನ್ನು ಘೋಷಿಸಿದರು.
* ಈ ಯೋಜನೆಯ ಮೂಲಕ ದೇಶದಾದ್ಯಂತ ಇರುವ ನಗರಗಳಲ್ಲಿನ ಕೊಳಚೆ ನೀರಿನ ಶುದ್ಧೀಕರಣ ಘಟಕವನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ಎರಡು ಭಾಗಗಳಿರಲಿವೆ. ಒಂದು 'ಅಮೃತ' ಮತ್ತು 'ಅಮೃತ 2.0'. ಈ ಯೋಜನೆಗೆ ₹6,800 ಕೋಟಿ ಮೀಸಲಿಡಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
* ಹೊಸ ಮಿಷನ್ ನಗರಗಳಿಗೆ ಆಧುನಿಕ ನೀರು ಮತ್ತು ಒಳಚರಂಡಿ ಸಂಸ್ಕರಣಾ ಘಟಕಗಳನ್ನು ಒದಗಿಸುವ ಮೂಲಕ ನಗರ ನೈರ್ಮಲ್ಯವನ್ನು ಇನ್ನಷ್ಟು ಸುಧಾರಿಸುವ ಗುರಿಯನ್ನು ಹೊಂದಿದೆ, ಭಾರತದಾದ್ಯಂತ ಸ್ವಚ್ಛ ಮತ್ತು ಹೆಚ್ಚು ಸಮರ್ಥನೀಯ ಜೀವನ ಪರಿಸ್ಥಿತಿಗಳನ್ನು ಖಾತ್ರಿಪಡಿಸುತ್ತದೆ.
* 'ದೇಶದಲ್ಲಿ ಸ್ವಚ್ಛತೆ ಮೂಡಿರುವುದರಿಂದ ಡಯೇರಿಯಾ ರೋಗದಿಂದ ಮೃತಪಡುತ್ತಿದ್ದವರ ಸಂಖ್ಯೆ ಇಳಿಕೆಯಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ 2014ರಿಂದ 2019ರವರೆಗೆ ಸುಮಾರು 3 ಲಕ್ಷ ಜೀವಗಳು ಉಳಿದಿವೆ' ಎಂದು ಮೋದಿ ಹೇಳಿದರು.
* ‘ದೇಶದ 60 ಸಾವಿರದಿಂದ 70 ಸಾವಿರ ಮಕ್ಕಳ ಜೀವವನ್ನು ಸ್ವಚ್ಛ ಭಾರತ ಯೋಜನೆಯು ಉಳಿಸಿದೆ ಎಂದು ಅಂತರರಾಷ್ಟ್ರೀಯ ವರದಿಯೊಂದು ಹೇಳಿದೆ.
* 'ನಮಾಮಿ ಗಂಗೆ' ಯೋಜನೆ ಅಡಿಯಲ್ಲಿ ಗಂಗಾ ನದಿ ತೀರದ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆಗಾಗಿ 1,500 ಕೋಟಿ ಹಾಗೂ ಗೋಬರ್ ಧನ ಯೋಜನೆ' ಅಡಿಯಲ್ಲಿ 15 ಸಾಂದ್ರೀಕೃತ ಜೈವಿಕ ಅನಿಲ (ಸಿಬಿಜಿ) ಘಟಕ ಸ್ಥಾಪನೆಗೆ 1,332 ಕೋಟಿ ಅನುದಾನ ನೀಡುವುದಾಗಿ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದರು.
ಗುರುವಾರ, 03 ಅಕ್ಟೋಬರ್ 2024
10:49 ಪೂರ್ವಾಹ್ನ
Daily PDF
ನಗರಗಳ ಸ್ವಚ್ಛತೆಗೆ 'ಮಿಷನ್ ಅಮೃತ' ಯೋಜನೆ: ಪ್ರಧಾನಿ ಮೋದಿ ಘೋಷಣೆ
Authored by:
Jyoti Angadi