* ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ನಿಮ್ಹಾನ್ಸ್ ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ನಿಮ್ಹಾನ್ಸ್ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ನಿಮ್ಹಾನ್ಸ್ ನಿರ್ದೇಶಕಿ ಡಾ ಪ್ರತಿಮಾ ಮೂರ್ತಿ ಅವರು ಜಿನೀವಾದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
* ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು 2019 ರಲ್ಲಿ ಸ್ಥಾಪಿಸಿದೆ. ಈ ಪ್ರಶಸ್ತಿಯನ್ನು ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ಆರೋಗ್ಯ ಮತ್ತು ವಿಶ್ವಾದ್ಯಂತ ಯೋಗಕ್ಷೇಮದ ಸುಧಾರಣೆಗೆ ಗಮನಾರ್ಹ ಕೊಡುಗೆ ನೀಡಿದ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಗೆ ನೀಡಲಾಗುತ್ತದೆ.
* ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಈ ಪ್ರಶಸ್ತಿಗೆ ಭಾಜನವಾದ ನಿಮ್ಹಾನ್ಸ್‌ಗೆ ಅಭಿನಂದನೆಗಳನ್ನು ಸಲ್ಲಿಸಿದರು. ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಕೂಡ ನಿಮ್ಹಾನ್ಸ್ ಅನ್ನು ಅಭಿನಂದಿಸಿದರು.
* ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಅವರು ನಮ್ಮ ಸಾಂಸ್ಥಿಕ ಪ್ರಯಾಣದ ಈ ಹಂತದಲ್ಲಿ ಆರೋಗ್ಯ ಪ್ರಚಾರಕ್ಕಾಗಿ ಪ್ರತಿಷ್ಠಿತ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಸ್ವೀಕರಿಸಲು ನಾವು ಹೆಮ್ಮೆಪಡುತ್ತೇವೆ ಎಂದು ಖುಷಿ ಹಂಚಿಕೊಂಡರು. ಅಲ್ಲದೇ ಇದು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ನಮ್ಮ ಧ್ಯೇಯವನ್ನು ಮುಂದುವರಿಸುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಹೇಳಿದರು.
NIMHANS ಸಂಸ್ಥೆಗೆ ಪ್ರತಿಷ್ಠಿತ WHO ನೆಲ್ಸನ್ ಮಂಡೇಲಾ ಪ್ರಶಸ್ತಿ
Published by Yallamma G
04 ಜೂನ್ 2024