* ಪ್ರಧಾನಿ ನರೇಂದ್ರ ಮೋದಿ ಅವರ ಸಮಿತಿಯು ಘೋಷಿಸಿದಂತೆ ಮಾಜಿ ನಿವೃತ್ತ ಐಎಎಸ್ ಅಧಿಕಾರಿಗಳಾದ ಸುಖ್ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮಾರ್ಚ್ 14 ರಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ತಿಳಿಸಿದರು.
* ಮುಂಬರುವ ಲೋಕಸಭೆ ಚುನಾವಣೆಗಾಗಿ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯಕ್ತ ರಾಜೀವ್ ಕುಮಾರ್ ಅವರಿಗೆ ನೆರವಾಗಲು ಇಬ್ಬರು ಚುನಾವಣಾ ಆಯುಕ್ತರ ನೇಮಕದ ತುರ್ತು ಅಗತ್ಯವಿತ್ತು. 
* ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಇಬ್ಬರು ಅಧಿಕಾರಿಗಳ ಹೆಸರನ್ನು ಆಯ್ಕೆ ಮಾಡಲಾಗಿದೆ. ಅಧೀರ್ ರಂಜನ್ ಚೌಧರಿ ಅವರು ಈ ಸಮಿತಿ ಸದಸ್ಯರಾಗಿದ್ದಾರೆ.
* ಸಂಧು ಮತ್ತು ಕುಮಾರ್ ಇಬ್ಬರೂ 1988ರ ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿಗಳಾಗಿದ್ದಾರೆ. ಸುಖ್ಬೀರ್ ಸಿಂಗ್ ಸಂಧು ಅವರು ಉತ್ತರಾಖಂಡದ ಮುಖ್ಯ ಕಾರ್ಯದರ್ಶಿಯಾಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 
* ಜ್ಞಾನೇಶ್ ಕುಮಾರ್ ಅವರು ಗೃಹ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವಲ್ಲಿ ಪಾತ್ರ ವಹಿಸಿದ್ದರು.
*  ಅಂತಿಮವಾಗಿ ಆಯ್ಕೆ ಮಾಡಿದ ಅಭ್ಯರ್ಥಿಗಳಲ್ಲಿ ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ ಅವರು ಸೇರಿದ್ದಾರೆ.
* ಚುನಾವಣಾ ಆಯುಕ್ತರಾಗಿದ್ದ ಅನೂಪ್ ಚಂದ್ರ ಪಾಂಡೆ ಅವರು ಫೆಬ್ರವರಿ 14 ರಂದು ನಿವೃತ್ತಿ ಹೊಂದಿದ್ದರು ಹಾಗೂ ಅರುಣ್ ಗೋಯಲ್ ಅವರು ರಾಜೀನಾಮೆ ನೀಡಿದರು.