* ವಾರ್ಷಿಕವಾಗಿ ನವೆಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಆಚರಿಸಲಾಗುತ್ತದೆ. ಕ್ಯಾನ್ಸರ್ ಅನ್ನು ಆರಂಭಿಕ ಪತ್ತೆ ಮಾಡುವುದು, ತಡೆಗಟ್ಟುವಿಕೆ ಮತ್ತು ಚಿಕಿತ್ಸೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಗುರಿಯಾಗಿದೆ.
* ಕ್ಯಾನ್ಸರ್ ಎಂಬ ಹೆಸರೇ ಭಯ ಹುಟ್ಟಿಸುತ್ತದೆ. ಇದೊಂದು ಮಹಾಮಾರಿ. ಜನರಿಗೆ ಈ ಕುರಿತು ಅರಿವು ಮೂಡಿಸುವುದರ ಜೊತೆಗೆ ಈ ರೋಗದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದು ಅವಶ್ಯವಾಗಿದೆ ಈ ನಿಟ್ಟಿನಲ್ಲಿ ಭಾರತದಲ್ಲಿ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.
* ಮೊದಲ ಬಾರಿಗೆ ಸೆಪ್ಟೆಂಬರ್ 2014 ರಂದು ಆಗಿನ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೇಂದ್ರ ಸಚಿವರಾದ ಡಾ. ಹರ್ಷವರ್ಧನ್ ಅವರು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನಕ್ಕೆ ಚಾಲನೆ ನೀಡಿದರು.
* ಭಾರತದಲ್ಲಿ ಕಳೆದ ಹತ್ತು ವರ್ಷಗಳಿಂದ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಆಚರಿಸಲಾಗುತ್ತಿದೆ. ಈ ದಿನ ರೇಡಿಯಂ ಮತ್ತು ಪೊಲೊನಿಯಂ ಅನ್ನು ಅನ್ವೇಷಣೆ ಮಾಡಿದ ಮೇಡಮ್ ಕ್ಯೂರಿ ಅವರ ಹುಟ್ಟಿದ ದಿನವಾದ್ದರಿಂದ ಅವರ ಕೊಡುಗೆಯನ್ನು ಸ್ಮರಿಸುವುದಕ್ಕಾಗಿ ನವೆಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಆಚರಣೆ ಮಾಡಲಾಗುತ್ತದೆ. ಮೇಡಮ್ ಕ್ಯೂರಿ ಅವರ ಸಂಶೋಧನೆಗಾಗಿ 1911 ರಲ್ಲಿ ನೊಬೆಲ್ ಪ್ರಶಸ್ತಿ ನೀಡಲಾಗಿತ್ತು.
* WHO ಪ್ರಕಾರ, ತಂಬಾಕಿನಿಂದ ದೂರವಿರುವುದು, ಆರೋಗ್ಯಕರ ದೇಹದ ತೂಕವನ್ನು ಕಾಪಾಡಿಕೊಳ್ಳುವುದು, ಆರೋಗ್ಯಕರ ಆಹಾರ (ಹಣ್ಣು ಮತ್ತು ತರಕಾರಿಗಳು), ನಿಯಮಿತವಾಗಿ ದೈಹಿಕ ಚಟುವಟಿಕೆಯನ್ನು ಮಾಡುವುದು, ಆಲ್ಕೊಹಾಲ್ ಸೇವನೆ ತಪ್ಪಿಸುವುದು ಅಥವಾ ಕಡಿಮೆ ಮಾಡುವುದು, HPV ವಿರುದ್ಧ ಲಸಿಕೆ ಹಾಕುವ ಮೂಲಕ ಕ್ಯಾನ್ಸರ್ ಅಪಾಯ ಕಡಿಮೆ ಮಾಡಬಹುದು. ಮತ್ತು ಹೆಪಟೈಟಿಸ್ ಬಿ, ಮತ್ತು ನೇರಳಾತೀತ ವಿಕಿರಣ ತಪ್ಪಿಸುವುದು. ಇವುಗಳು ಕಾನ್ಸರ್ ತಡೆಗಟ್ಟುವಿಕೆಯಾ ಕ್ರಮಗಳಾಗಿವೆ.
* ವಿವಿಧ ಆರೋಗ್ಯ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರು ಮತ್ತು ಕಾರ್ಯಕರ್ತರು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಗುರುತಿಸಲು ಜಾಗೃತಿ ಅಭಿಯಾನಗಳು, ಸೆಮಿನಾರ್‌ಗಳನ್ನು ಆಯೋಜಿಸುತ್ತಾರೆ. ಮತ್ತು ರಾಷ್ಟ್ರವ್ಯಾಪಿ ಕ್ಯಾನ್ಸರ್ ರೋಗ ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾರೆ.
ನವೆಂಬರ್ 07: ರಾಷ್ಟೀಯ ಕ್ಯಾನ್ಸರ್ ಜಾಗೃತಿ ದಿನ
Published by Jyoti Angadi
07 ನವೆಂಬರ್ 2024