* 'ಒಂದು ದೇಶ, ಒಂದು ಚುನಾವಣೆ' ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ(ಡಿಸೆಂಬರ್ 12) ಅನುಮೋದನೆ ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಿದೆ.* 'ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆಯ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಿತ್ತು. ಇದನ್ನು ಕೇಂದ್ರ ಸರ್ಕಾರ ಅಂಗೀಕರಿಸಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ.* ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.* ಕೇಂದ್ರ ಸರ್ಕಾರ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸೆಪ್ಟೆಂಬರ್ 2, 2023ರಲ್ಲಿ ರಚನೆ ಮಾಡಿತ್ತು. ಈ ಸಮಿತಿ ರಾಜಕೀಯ ಪಕ್ಷಗಳು ಸೇರಿದಂತೆ ವಿವಿಧ ಭಾಗೀದಾರರ ಜೊತೆ ವಿವರವಾದ ಚರ್ಚೆಯನ್ನು ನಡೆಸಿ ಮಾರ್ಚ್ 14, 2024ರಂದು ಸರ್ಕಾರಕ್ಕೆ ವರದಿಯನ್ನು ಸಲ್ಲಿಕೆ ಮಾಡಿತ್ತು.* ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.