* ದೇಶದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಸಾಧ್ಯತೆಯನ್ನು ಅವಲೋಕಿಸಲು ಕೇಂದ್ರ ಸರ್ಕಾರವು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ ಎಂದು ಸೆಪ್ಟೆಂಬರ್ 1 ರಂದು ಮೂಲಗಳು ತಿಳಿಸಿವೆ.
* ಸೆಪ್ಟೆಂಬರ್ 18 ಮತ್ತು 22 ರ ನಡುವೆ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದ ಒಂದು ದಿನದ ಬಳಿಕ ಈ ಮಾಹಿತಿ ಹೊರಬಿದ್ದಿದೆ.
* ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13 ನೇ ಅಧಿವೇಶನ ಹಾಗೂ ರಾಜ್ಯಸಭೆಯ 261ನೇ ಅಧಿವೇಶನ ಇದಾಗಿರಲಿದೆ.
* ಪ್ರಸ್ತುತ ಲೆಕ್ಕಾಚಾರದ ಪ್ರಕಾರ ಒಂದು ಬಾರಿ ದೇಶದಲ್ಲಿ ಚುನಾವಣೆ ಪ್ರಕ್ರಿಯೆಗೆ 50 ಸಾವಿರ ಕೋಟಿ ರೂ ಗಳಿಂದ 60 ಸಾವಿರ ಕೋಟಿ ರೂ ವೆಚ್ಚವಾಗಿತ್ತದೆ.
ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಅವಲೋಕಿಸಲು ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ
Published by Bhagya R K
01 ಸೆಪ್ಟೆಂಬರ್ 2023