* ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತದ ಹೈಕಮಿಷನ್ ಕಚೇರಿಗೆ ಮೊದಲ ಮಹಿಳಾ ಅಧಿಕಾರಿಯಾಗಿ ಐಎಫ್‌ಎಸ್ ಅಧಿಕಾರಿ ಗೀತಿಕಾ ಶ್ರೀವಾಸ್ತವ ನೇಮಕಗೊಂಡಿದ್ದಾರೆ.
* 2005 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ (IFS) ಅಧಿಕಾರಿಯಾಗಿರುವ ಗೀತಿಕಾ ಶ್ರೀವಾಸ್ತವ ಅವರು ಈ ಮೊದಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (MEA) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
* ಗೀತಿಕಾ ಅವರು ಈ ಹಿಂದೆ 2007 ರಿಂದ 2009 ರ ನಡುವೆ ಚೀನಾದಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
* ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತದ ಹೈಕಮಿಷನ್ ಕಚೇರಿಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಎಂ ಸುರೇಶ ಕುಮಾರ್ ಅವರು ದೆಹಲಿಗೆ ಮರಳಿ ಬರುವ ಸಾಧ್ಯತೆ ಇರುವ ಕಾರಣ ಈ ಹುದ್ದೆಗೆ ಗೀತಿಕಾ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.
* ಮೂಲತಃ ಉತ್ತರ ಪ್ರದೇಶದವರಾದ ಗೀತಿಕಾ ಅವರು ಈ ಮೊದಲು ಕೋಲ್ಕತ್ತಾದಲ್ಲಿ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿಯಾಗಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಐಒಆರ್ ವಿಭಾಗದಲ್ಲಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಗೆ ಮೊದಲ ಮಹಿಳಾ ಅಧಿಕಾರಿಯಾಗಿ ಗೀತಿಕಾ ನೇಮಕ
Published by Yallamma G
31 ಆಗಸ್ಟ್ 2023