* 2024ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಒಂದೇ ದಿನದಲ್ಲಿ ತನ್ನ ನಾಲ್ಕನೇ ಪದಕವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ನಾಲ್ಕನೇ ಪದಕದ ರೂಪದಲ್ಲಿ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.
* ಒಟ್ಟು 24 ಸುತ್ತುಗಳಲ್ಲಿ 234.9 ಅಂಕಗಳನ್ನು ಕಲೆಹಾಕಿದ ಮನೀಶ್ ಭಾರತಕ್ಕೆ ನಾಲ್ಕನೇ ಪದಕ ಗೆದ್ದುಕೊಟ್ಟಿದ್ದಾರೆ. ಈ ಸ್ಪರ್ಧೆಯಲ್ಲಿ ಕೊರಿಯಾದ ಜೋ ಜೊಂಗ್ಡು 237.4 ಅಂಕ ಗಳಿಸಿ ಚಿನ್ನದ ಪದಕ ಜಯಿಸಿದರು. ಚೀನಾದ ಯಂಗ್ ಚಾವೊ 214.3 ಅಂಕಗಳೊಂದಿಗೆ ಕಂಚಿನ ಪದಕ ವಶಪಡಿಸಿಕೊಂಡರು.
* ಇದರೊಂದಿಗೆ ಮನೀಶ್ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಇತಿಹಾಸದಲ್ಲಿ ಬಹು ಪದಕಗಳನ್ನು ಗೆದ್ದ ಆರನೇ ಭಾರತೀಯ ಅಥ್ಲೀಟ್ ಎನಿಸಿಕೊಂಡರು. ಇದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಸಿಕ್ಕಿರುವ ನಾಲ್ಕನೇ ಪದಕವಾಗಿದ್ದು ಶೂಟಿಂಗ್ ಒಂದರಲ್ಲೇ ಲಭಿಸಿದ ಮೂರನೇ ಪದಕವಾಗಿದೆ.
* ಮನೀಶ್ಗೂ ಮುನ್ನ ಸ್ಟಾರ್ ಶೂಟರ್ ಅವನಿ ಲೇಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದರೆ, ಇನ್ನು ಇದೇ ಈವೆಂಟ್ನಲ್ಲಿ ಭಾರತದ ಮತ್ತೊರ್ವ ಶೂಟರ್ ಮೋನಾ ಅಗರ್ವಾಲ್ ಕಂಚಿನ ಪದಕವನ್ನು ಗೆದ್ದು 17 ನೇ ಬೇಸಿಗೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ಪದಕ ಖಾತೆಯನ್ನು ತೆರೆದಿದ್ದರು.
* ಭಾರತಕ್ಕೆ ಒಂದೇ ದಿನ 4 ಪದಕ
- ಮಹಿಳೆಯರ 10 ಮೀಟರ್ ಏರ್ ರೈಫಲ್ SH1 ವಿಭಾಗದ ಫೈನಲ್‌ನಲ್ಲಿ ಶೂಟರ್ ಅವನಿ ಲೆಖರಾ ಮತ್ತು ಮೋನಾ ಅಹರ್ವಾಲ್ ಕ್ರಮವಾಗಿ ಚಿನ್ನ ಮತ್ತು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
- ಸ್ಟೇಡ್ ಡಿ ಫ್ರಾನ್ಸ್‌ನಲ್ಲಿ ನಡೆದ ಮಹಿಳೆಯರ 100 ಮೀ-ಟಿ 35 ಫೈನಲ್‌ನಲ್ಲಿ 23 ವರ್ಷ ವಯಸ್ಸಿನ ಪ್ರೀತಿ ಪಾಲ್ 14.21 ಸೆಕೆಂಡುಗಳಲ್ಲಿ ಗುರಿ ತಲುಪುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
- ಚಟೌರೊಕ್ಸ್‌ನಲ್ಲಿ ನಡೆದ ಪುರುಷರ 10 ಮೀಟರ್ ಏರ್ ಪಿಸ್ತೂಲ್ (SH1) ವಿಭಾಗದಲ್ಲಿ ಶೂಟರ್ ಮನೀಷ್ ನರ್ವಾಲ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
Paris Paralympics 2024 : 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ನಲ್ಲಿ ಮನೀಶ್ ನರ್ವಾಲ್ಗೆ ಬೆಳ್ಳಿ, ಭಾರತಕ್ಕೆ ಒಂದೇ ದಿನ 4 ಪದಕ
Published by Yallamma G
31 ಆಗಸ್ಟ್ 2024