* ಪಚ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಯಾದ ಸಿಪಿಎಂ ಪಕ್ಷದ ಬುದ್ಧದೇವ ಭಟ್ಟಾಚಾರ್ಯ ಆಗಸ್ಟ್ 8 ರಂದು ನಿಧನರಾಗಿದ್ದಾರೆ.
* ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಸಲೀಂ ಅವರು ತಿಳಿಸಿದ್ದಾರೆ.
* ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು. ಭಟ್ಟಾಚಾರ್ಯ ಅವರು ಪತ್ನಿ ಮೀರಾ ಮತ್ತು ಪುತ್ರಿ ಸುಚೇತನಾ ಅವರನ್ನು ಅಗಲಿದ್ದಾರೆ.ಬುದ್ಧದೇವ್ ಭಟ್ಟಾಚಾರ್ಯ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.
* ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದ (ಸಿಪಿಐಎಂ) ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಮಿತಿಯಾದ ಪಾಲಿಟ್ ಬ್ಯೂರೊದ ಮಾಜಿ ಸದಸ್ಯರಾಗಿದ್ದರು.
* ಪಶ್ಚಿಮ ಬಂಗಾಳದಲ್ಲಿ ಎಡಪಕ್ಷದ 34 ವರ್ಷಗಳ ಆಡಳಿತದಲ್ಲಿ ಭಟ್ಟಾಚಾರ್ಯ ಅವರು 2000 ರಿಂದ 2011 ರವರೆಗೆ ಸತತ 11 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎರಡನೇ ಮತ್ತು ಕೊನೆಯ ಸಿಪಿಎಂ ಮುಖ್ಯಮಂತ್ರಿಯಾಗಿದ್ದರು.
* ಭಟ್ಟಾಚಾರ್ಯ ಅವರು 2011 ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ಟಿಎಂಪಿ ಪಕ್ಷದ ವಿರುದ್ಧ ಸೋಲು ಕಂಡಿದ್ದರು. ಆ ಮೂಲಕ ರಾಜ್ಯದಲ್ಲಿ ಎಡರಂಗದ 34 ವರ್ಷಗಳ ಆಳ್ವಿಕೆ ಕೊನೆಗೊಂಡಿತ್ತು.
* ಕ್ಷೀಣಿಸುತ್ತಿರುವ ಆರೋಗ್ಯದಿಂದಾಗಿ ಅವರು ರಾಜಕೀಯ ರಂಗದಿಂದ ದೂರ ಉಳಿದಿದ್ದರು. ಸಿಪಿಎಂ ಪಕ್ಷದ ಪಾಲಿಟ್‌ಬ್ಯೂರೊ ಮತ್ತು ಕೇಂದ್ರ ಸಮಿತಿಯ ಸದಸ್ಯತ್ವಕ್ಕೆ 2015ರಲ್ಲಿ ರಾಜೀನಾಮೆ ನೀಡಿದ್ದರು. 2018ರಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದರು.
ಪಚ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಯ ನಿಧನ
Published by Jyoti Angadi
10 ಆಗಸ್ಟ್ 2024