* ಭರತನಾಟ್ಯ ಮತ್ತು ಕೂಚುಪುಡಿಯ ಹೆಸರಾಂತ ಕಲಾವಿದೆ, ಪದ್ಮ ಪ್ರಶಸ್ತಿ ಪುರಸ್ಕೃತೆ ಯಾಮಿನಿ ಕೃಷ್ಣಮೂರ್ತಿ ನಿಧನರಾಗಿದ್ದಾರೆ. 84 ವಯಸ್ಸಿನ ಯಾಮಿನಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಆಗಸ್ಟ್ 3 ರಂದು ಕೊನೆಯುಸಿರೆಳೆದಿದ್ದಾರೆ.
* ಯಾಮಿನಿ ಕೃಷ್ಣಮೂರ್ತಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕಳೆದ 7 ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಮ್ಯಾನೇಜರ್ ಹಾಗೂ ಕಾರ್ಯದರ್ಶಿಯಾಗಿದ್ದ ಗಣೇಶ್ ಮಾಹಿತಿ ನೀಡಿದ್ದಾರೆ.
* ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ 1940ರ ಡಿಸೆಂಬರ್ 20ರಂದು ಅವರು ಜನಿಸಿದ್ದರು. ಸಂಸ್ಕೃತ ವಿದ್ವಾಂಸ ಎಂ. ಕೃಷ್ಣಮೂರ್ತಿ ಅವರ ತಂದೆ. ಅವರು ಐದನೇ ವಯಸ್ಸಿನಿಂದಲೇ ಭರತನಾಟ್ಯ ಕಲಿಕೆಯಲ್ಲಿ ತೊಡಗಿದ್ದರು.
* ಯಾಮಿನಿ ಅವರು 28ನೇ ವಯಸ್ಸಿನಲ್ಲಿದ್ದಾಗಲೇ 1968ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತರಾಗಿದ್ದರು. 2001ರಲ್ಲಿ ಪದ್ಮಭೂಷಣ, 2016ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳು ಅವರಿಗೆ ಸಂದಿವೆ. 1977ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.
ಪದ್ಮಭೂಷಣ ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನ
Published by Jyoti Angadi
05 ಆಗಸ್ಟ್ 2024