* ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ.16ರಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.
* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 16ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು,ಹಾಗೂ ಫೆ.12ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರುವರಿ 23ರವರೆಗೆ ಅಧಿವೇಶನದ ನಡಾವಳಿಗಳು ಜರುಗಲಿವೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದರು.
* ಫೆಬ್ರುವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಫೆಬ್ರುವರಿ19 ರಿಂದ ಬಜೆಟ್ ಮೇಲೆ ಚರ್ಚೆಗಳು ನಡೆಯಲಿವೆ.
* ಕರ್ನಾಟಕ ವಿದ್ಯುತ್ ನಿಗಮವು 2022-23ನೆ ಸಾಲಿನಲಿ 1630 ಕೋಟಿ ರೂ.ಮತ್ತು 2023-24ನೆ ಸಾಲಿನಲ್ಲಿ 2800 ಕೋಟಿ ರೂ.ಗಳು ಸೇರಿ ಒಟ್ಟು 4,430.00 ಕೋಟಿ ರೂ.ಗಳನ್ನು ಬ್ಯಾಂಕ್‍ಗಳು, ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲಕ್ಕೆ ಸರಕಾರದ ಖಾತರಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದರು.
* ಗೃಹಜ್ಯೋತಿ ಯೋಜನೆ ಅಡಿಯಲ್ಲಿ 48 ಯೂನಿಟ್‌ಗಳಿಗಿಂತ ಕಡಿಮೆ ಬಳಸುವ ಗ್ರಾಹಕರಿಗೆ ಶೇ.10ರಷ್ಟು ಬದಲಿಗೆ ಹೆಚ್ಚುವರಿ 10 ಅರ್ಹತಾ ಯೂನಿಟ್‌ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ.
* ಬೆಸ್ಕಾಂ ವ್ಯಾಪ್ತಿಯಲ್ಲಿ 69.73 ಲಕ್ಷ ಕುಟುಂಬಗಳು 48 ಯೂನಿಟ್‍ಗಿಂತ ಕಡಿಮೆ ಬಳಕೆ ಮಾಡುತ್ತಿದ್ದಾರೆ. 10 ಯೂನಿಟ್‍ಗಳ ಹೆಚ್ಚಳದಿಂದ ಸರಕಾರಕ್ಕೆ 33 ಕೋಟಿ ರೂ.ಗಳ ವೆಚ್ಚ ತಗುಲಬಹುದೆಂದು ಅಂದಾಜಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದರು.
ಫೆಬ್ರುವರಿ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ
Published by Bhagya R K
20 ಜನವರಿ 2024