* ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಫೆಬ್ರುವರಿ 09 ರಂದು ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಹಾಗೂ ಕೃಷಿ ತಜ್ಞ ಡಾ|| ಎಂ.ಎಸ್ ಸ್ವಾಮಿನಾಥನ್ ಇವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಘೋಷಿಸಿದೆ.
* ಇತ್ತೀಚಿಗೆ ಕೇಂದ್ರ ಸರ್ಕಾರ ಈ ಬಾರಿ ಐವರು ಸಾಧಕರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿದ್ದು, ಆ ಪೈಕಿ ಮೊದಲಿಗೆ ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಮತ್ತು ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್ ಅವರಿಗೆ ಘೋಷಿಸಲಾಗಿತ್ತು. ಇದೀಗ ಮತ್ತೆ ಮೂವರಿಗೆ ಘೋಷಣೆ ಮಾಡುವ ಮೂಲಕ ಭಾರತ ರತ್ನ ಗೌರವವನ್ನು ಪಂಚ ರತ್ನ ಗೌರವವನ್ನಾಗಿ ಕೇಂದ್ರ ಸರ್ಕಾರ ನೀಡಿದೆ.
* ಕೃಷಿ ತಜ್ಞ ಡಾ|| ಎಂ.ಎಸ್ ಸ್ವಾಮಿನಾಥನ್ ಅವರು ಕೃಷಿ ಮತ್ತು ರೈತರ ಕಲ್ಯಾಣದಲ್ಲಿ ನಮ್ಮ ದೇಶಕ್ಕೆ ನೀಡಿದ ಅತ್ತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ಅವರು ಸಲಹೆ ಸೂಚನೆಗಳನ್ನು ನೀಡಿದರು.
* ಭಾರತದ ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಸೌಭಾಗ್ಯ. ಈ ಗೌರವ ದೇಶಕ್ಕೆ ಅವರು ನೀಡಿದ ಅನುಪಮ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಸಮರ್ಪಿಸಲಾಗಿದೆ.
ಶುಕ್ರವಾರ, 09 ಫೆಬ್ರುವರಿ 2024
3:48 ಅಪರಾಹ್ನ
Daily PDF
ಪಿ ವಿ ನರಸಿಂಹ ರಾವ್, ಚೌಧರಿ ಚರಣ್ ಸಿಂಗ್, ಎಂ ಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ
Authored by:
Akshata Halli