➤ ಬಾಂಗ್ಲಾದೇಶದ ರಾಜಕೀಯದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗುತ್ತಿದ್ದು, ಫೆಬ್ರವರಿ 12ರ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ಅಧಿಕಾರಕ್ಕೆ ಮರಳಿದೆ. ಅದರಂತೆ, ಫೆಬ್ರವರಿ 17ರಂದು ಸಂಜೆ 4 ಗಂಟೆಗೆ ಢಾಕಾದ ಸಂಸತ್ ಭವನದ ದಕ್ಷಿಣ ಪ್ಲಾಜಾದಲ್ಲಿ ನಡೆಯಲಿರುವ ಸಮಾರಂಭದಲ್ಲಿ, ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರಿಗೆ ಮುಖ್ಯ ಚುನಾವಣಾ ಆಯುಕ್ತ ಎ.ಎಂ.ಎಂ. ನಾಸಿರ್ ಉದ್ದೀನ್ ಅವರು ನೂತನ ಪ್ರಧಾನಿಯಾಗಿ ಪ್ರಮಾಣವಚನ ಬೋಧಿಸಲಿದ್ದಾರೆ.
➤ ಈ ಐತಿಹಾಸಿಕ ಸಮಾರಂಭಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಆದರೆ, ಅಂದೇ ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪೂರ್ವನಿರ್ಧರಿತ ಕಾರ್ಯಕ್ರಮ ಇರುವುದರಿಂದ ಮೋದಿ ಅವರು ಭಾಗವಹಿಸುತ್ತಿಲ್ಲ. ಭಾರತದ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರ ಜೊತೆಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕೂಡ ತೆರಳಲಿದ್ದಾರೆ.
➤ ಸುಮಾರು ಎರಡು ದಶಕಗಳ ಬಳಿಕ ಬಿಎನ್‌ಪಿ ಪಕ್ಷವು ಅಧಿಕಾರಕ್ಕೆ ಮರಳುತ್ತಿರುವುದು ವಿಶೇಷ. 300 ಸ್ಥಾನಗಳ ಸಂಸತ್ತಿನಲ್ಲಿ ಬಿಎನ್‌ಪಿ ನೇತೃತ್ವದ ಮೈತ್ರಿಕೂಟ 212 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ. ಜಮಾತ್-ಎ-ಇಸ್ಲಾಮಿ ಮೈತ್ರಿಕೂಟ 77 ಸ್ಥಾನಗಳನ್ನು ಪಡೆದು ಪ್ರಬಲ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.
Test Your Knowledge!
Attempt daily current affairs quizzes to boost your exam readiness.
Discussion & Comments (0)
Have a query or thoughts about this current affair?
No comments on this article yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.